ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ ಮಡಿಕೇರಿ
ಹುಲಿ ದಾಳಿಗೆ ಹಸು ಬಲಿಯಾದ ಘಟನೆ ವೀರಾಜಪೇಟೆ ತಾಲೂಕಿನ ಮಾಲ್ದಾರೆ ವ್ಯಾಪ್ತಿಯ ತಟ್ಟಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಗ್ರಾಮದ ನಿವಾಸಿ ನಿಂಗಿ ಎಂಬವರಿಗೆ ಸೇರಿದ 10 ವರ್ಷದ ಹಸು ಹುಲಿ ದಾಳಿಗೆ ಬಲಿಯಾಗಿದೆ. ದೇವಮಚ್ಚಿ ಮೀಸಲು ಅರಣ್ಯದಿಂದ ಕಂದಕ ದಾಟಿ ರಸ್ತೆಗೆ ಬಂದ ಹುಲಿ ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದ ಸಂದರ್ಭ ಅರಣ್ಯದಂಚಿನಲ್ಲಿ ಹುಲಿ ಕಾಣಿಸಿಕೊಂಡಿದೆ. ನಿರಂತರ ಹಸುಗಳನ್ನು ಕೊಂದು ಗ್ರಾಮದಲ್ಲಿ ಆತಂಕ ಸೃಷ್ಟಿಸಿರುವ ಹುಲಿಯನ್ನು ಶೀಘ್ರ ಸೆರೆ ಹಿಡಿಯಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಈ ಭಾಗದಲ್ಲಿ ಹುಲಿ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಜೀವ ಭಯ ಕಾಡುತ್ತಿದೆ.