ಹೊಸದಿಗಂತ ವರದಿ, ಮಡಿಕೇರಿ:
ಹುಲಿಯೊಂದು ಕಾಫಿ ತೋಟದಲ್ಲಿ ಸಾವಿಗೀಡಾಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಹೋಬಳಿಯಲ್ಲಿ ಬೆಳಕಿಗೆ ಬಂದಿದೆ.
ಬಾಳೆಲೆ ಸಮೀಪದ ಕೊಟ್ಟಗೇರಿ ಗ್ರಾಮದ ಎ.ದಿಲ್ಲು ತಿಮ್ಮಯ್ಯ ಎಂಬವರ ಕಾಫಿ ತೋಟದಲ್ಲಿ ಅಂದಾಜು 14 ವರ್ಷ ಪ್ರಾಯದ ಹುಲಿಯ ಕಳೇಬರ ಪತ್ತೆಯಾಗಿದೆ.
ತೋಟದ ಮಾಲಕರು ಅರಣ್ಯ ಇಲಾಖೆಗೆ ನೀಡಿದ ಮಾಹಿತಿ ಅನ್ವಯ ಅರಣ್ಯ ಇಲಾಖೆಗೆ ತಿತಿಮತಿ ಎಸಿಎಫ್ ಗೋಪಾಲ್, ಪೊನ್ನಂಪೇಟೆ ಆರ್‌ಎಫ್‌ಓ ಶಂಕರಪ್ಪ, ಡಿಆರ್‌ಎಫ್‌ಓ ದಿವಾಕರ್, ತಿತಿಮತಿ ವಲಯ ಡಿಆರ್‌ಎಫ್‌ಓ ರವಿಕಿರಣ್, ಚೇತನ್, ಕಲ್ಲಳ್ಳ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಹುಲಿಯು ನಿತ್ರಾಣದಿಂದ ಸಾವನ್ನಪ್ಪಿರುವ ಶಂಕೆಯಿದ್ದು, ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ನೈಜಾಂಶ ತಿಳಿಯಬೇಕಿದೆ .