Friday, December 8, 2023

Latest Posts

ಹುಲಿಯ ಉಗುರು ಲಾಕೆಟ್ ಕೇಸ್: ವರ್ತೂರ್ ಸಂತೋಷ್ ವಿಚಾರಣಾಧೀನ ಕೈದಿ ನಂ.10935

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುತ್ತಿಗೆಗೆ ಹುಲಿಯ ಉಗುರು ಹೊಂದಿರುವ ಲಾಕೆಟ್ ಧರಿಸಿದ್ದ ಎನ್ನುವ ಕಾರಣಕ್ಕಾಗಿ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಎರಡು ದಿನಗಳ ಹಿಂದೆಯಷ್ಟೇ ಬಿಗ್ ಬಾಸ್ ಮನೆಯಿಂದಲೇ ಬಂಧಿಸಲಾಗಿತ್ತು. ನಿನ್ನೆ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು.

ಎ.ಸಿ.ಜೆ.ಎಂ ನ್ಯಾಯಾಧೀಶರು 14 ದಿನಗಳ ಕಾಲ ಸಂತೋಷ್ ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹಾಗಾಗಿ ಪರಪ್ಪನ ಅಗ್ರಹಾರ ಜೈಲಿಗೆ(Jail) ಅವರನ್ನು ಕಳುಹಿಸಲಾಗಿದೆ. ಸಂತೋಷ್ ಅವರಿಗೆ ಕೈದಿ ನಂಬರ್ ಕೂಡ ನೀಡಲಾಗಿದೆ.

ವರ್ತೂರ್ ಸಂತೋಷ್ ಅವರಿಗೆ ಕಾರಗೃಹ ಅಧಿಕಾರಿಗಳು ವಿಚಾರಣಾಧೀನ ಕೈದಿ ಸಂಖ್ಯೆ 10935 ಅನ್ನು ನೀಡಿದ್ದಾರೆ. ಕೋರ್ಟಿಗೆ ರಜೆ ಇದ್ದ ಕಾರಣದಿಂದಾಗಿ ನ್ಯಾಯಾಧೀಶರ ನಿವಾಸಕ್ಕೆ ಸಂತೋಷ್ ಅವರನ್ನು ಹಾಜರು ಪಡಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನದ ಚೈನು ಮಾಡಿರುವ ಚಿನ್ನದಂಗಡಿ ಮಾಲೀಕನಿಗೆ ಅರಣ್ಯಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಹುಲಿ ಉಗುರು ಕೊಟ್ಟಿದ್ದ್ಯಾರು?
ಬಿಗ್ ಬಾಸ್ (Bigg Boss Kannada) ಮನೆಯಿಂದ ಮೊನ್ನೆಯಷ್ಟೇ ಅರೆಸ್ಟ್ ಆಗಿರುವ ಸ್ಪರ್ಧಿ ವರ್ತೂರ ಸಂತೋಷ (Varthuru Santhosh) ಅವರನ್ನು ಅರಣ್ಯಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ತನ್ನಲ್ಲಿರುವ ಹುಲಿ ಉಗುರು ಬಂದಿದ್ದು ಹೇಗೆ? ಯಾರು ಕೊಟ್ಟರು? ಎಲ್ಲಿಂದ ಖರೀದಿ ಮಾಡಿದ್ದೀರಿ? ಮಾರಿದವರು ಈಗ ಎಲ್ಲಿದ್ದಾರೆ? ಎಷ್ಟು ಮಂದಿಗೆ ಈ ರೀತಿ ಉಗುರು ಮಾರಲಾಗಿದೆ ಹೀಗೆ ಇತ್ಯಾದಿ ಪ್ರಶ್ನೆಗಳನ್ನು ಅರಣ್ಯಾಧಿಕಾರಿಗಳು ಸಂತೋಷ್ ಮುಂದೆ ಇಟ್ಟಿದ್ದಾರೆ. ಅದಕ್ಕೆ ಸಂತೋಷ್ ಕೂಡ ಉತ್ತರ ನೀಡಿದ್ದಾನೆ ಎನ್ನುವ ಮಾಹಿತಿ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!