ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧ ಹುಲಿ ಉಗುರು (Tiger Claw) ಧರಿಸಿದ ಆರೋಪ ಕೇಳಿಬಂದಿದ್ದು, ಜೊತೆಗೆ ಅವರ ನಿವಾಸಕ್ಕೂ ಅಧಿಕಾರಿಗಳು ತೆರಳಿ ದಾಳಿ ಮಾಡಿದ್ದರು. ಇದನ್ನು ಪ್ರಶ್ನಿಸಿ ನಟ, ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.
ನಿನ್ನೆ ಅರಣ್ಯಾಧಿಕಾರಿಗಳ ದಾಳಿ ಕಾನೂನು ಬಾಹಿರ. ಅರಣ್ಯಾಧಿಕಾರಿಗಳ ಕ್ರಮ ಸರಿ ಇಲ್ಲ ಎಂದು ಹೈಕೋರ್ಟಿ (High Court)ಗೆ ಜಗ್ಗೇಶ್ (Jaggesh) ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರಣ್ಯಾಧಿಕಾರಿಗಳ ನಡೆ ಕಾನೂನು ಬಾಹಿರ ಎಂದು ಘೋಷಿಸಲು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಅರಣ್ಯಾಧಿಕಾರಿಗಳು ಕೊಟ್ಟಿರುವ ನೋಟೀಸ್ ಅನ್ನು ರದ್ದು ಪಡಿಸಲು ನಟ ಜಗ್ಗೇಶ್ ಮನವಿ ಸಲ್ಲಿಸಿದ್ದಾರೆ.
ನೋಟೀಸ್ ಗೆ ಉತ್ತರ ನೀಡುವ ಮುನ್ನವೇ ದಾಳಿ ಮಾಡಿದ್ದಾರೆ. ಪರಶೀಲನೆ ನೆಪದಲ್ಲಿ ಮನೆಯ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನ ಆಧರಿಸಿ ತೇಜೋವಧೆ ಮಾಡಲಾಗುತ್ತಿದ್ದೆ ಎಂದು ರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ.