ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ.
ಕೋರ್ಟ್ ಗೆ ಕಡತಗಳು ತಲುಪದ ಹಿನ್ನೆಲೆ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ ಎಂದು ತಿಳಿದು ಬಂದಿದೆ.
ಹುಲಿ ಉಗುರು ಧರಿಸಿ ಬಂಧನಕ್ಕೊಳಗಾದ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ನ.6 ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನಂತರ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.