ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಮಡಿಕೇರಿ:
ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ದಾಳಿ ಮುಂದುವರಿದಿದೆ.
ಬೆಕ್ಕೆಸೊಡ್ಲೂರು ಗ್ರಾಮದಲ್ಲಿ ಶುಕ್ರವಾರ ಹಸುವೊಂದನ್ನು ಹುಲಿ ಕೊಂದು ಹಾಕಿದೆ. ಗ್ರಾಮದ ಮಲ್ಲಮಾಡ ಉಷಾ ಎಂಬವರಿಗರ ಸೇರಿದ ಹಸು ಹುಲಿ ದಾಳಿಗೆ ಬಲಿಯಾಗಿದ್ದು, ಕಳೆದ ಕೆಲವು ದಿನಗಳಿಂದ ನೆಮ್ಮದಿಯ ಉಸಿರು ಬಿಟ್ಟಿದ್ದ ಗ್ರಾಮಸ್ಥರು ಮತ್ತೆ ಆತಂಕಕ್ಕೆ ಸಿಲುಕಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ
ಪರಿಶೀಲಿಸಿದ್ದಾರೆ.