ದಿಗಂತ ವರದಿ ಗೋಣಿಕೊಪ್ಪ:
ನರಹಂತಕ ಹುಲಿಯನ್ನು ಸೆರೆ ಹಿಡಿಯಲು ದಕ್ಷಿಣ ಕೊಡಗಿನ ಹುದಿಕೇರಿ ಹೋಬಳಿಯ ಬೆಳ್ಳೂರಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿರುವುದರ ಬೆನ್ನಲ್ಲೇ ಮಂಗಳವಾರ ಮತ್ತೊಂದು ಹಸು ವ್ಯಾಘ್ರನಿಗೆ ಬಲಿಯಾಗಿದೆ.
ಬಾಳೆಲೆ ಹೋಬಳಿಯ ಕೊಟ್ಟಗೇರಿಗ್ರಾಮದ ಅಳಮೇಗಂಡ ಮೊಣ್ಣಪ್ಪ ಅವರಿಗೆ ಸೇರಿದ ಉತ್ತಮ ತಳಿಯ ಗಬ್ಬದ ಹಸುವನ್ನು ಹುಲಿ ಕೊಂದು ಹಾಕಿದೆ.
ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಈ ದಾಳಿ ನಡೆದಿದ್ದು, ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡಾಯಿಸಿ ಪರಿಹಾರದ ಭರವಸೆ ನೀಡಿದ್ದಾರೆ.