‘ಟೈಗರ್ ನಾಗೇಶ್ವರ್ ರಾವ್’ ಟೀಸರ್ ರಿಲೀಸ್: ಮಾಸ್ ಅವತಾರದಲ್ಲಿ ಎಂಟ್ರಿ ಕೊಟ್ಟ ರವಿತೇಜ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾಸ್ ಮಹಾರಾಜ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ನಟ ರವಿತೇಜ ಅವರು ಹೊಸದೊಂದು ಮಾಸ್ ಆಕ್ಷನ್ ಸಿನಿಮಾದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದು , ಅಕ್ಟೋಬರ್ 20ರಂದು ವಿಶ್ವಾದ್ಯಂತ ರವಿತೇಜ ನಟನೆಯ ‘ಟೈಗರ್ ನಾಗೇಶ್ವರ್ ರಾವ್’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸಿದೆ.  . ಸಿನಿಮಾದಲ್ಲಿ ಸಖತ್ ಮಾಸ್ ಅವತಾರದಲ್ಲಿ ರವಿತೇಜ ಕಾಣಿಸಿಕೊಂಡಿದ್ದಾರೆ.

ಇದೀಗ ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಟೈಗರ್ ಇನ್ವೆಷನ್ ಎಂಬ ಹೆಸರಿನೊಂದಿಗೆ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. ಮದ್ರಾಸ್ ಸೆಂಟರ್ ಜೈಲಿನಿಂದ ಎಸ್ಕೇಪ್ ಆಗಿರುವ ಸ್ಟುವರ್ಟ್ ಪುರಂ ಕಳ್ಳನಿಗಾಗಿ ಹುಡುಗಾಟ ನಡೆಸುತ್ತಿರುವ ದೃಶ್ಯಗಳ ಮೂಲಕ ಟೀಸರ್ ಪ್ರಾರಂಭವಾಗುತ್ತದೆ. ಗುಪ್ತಚಾರ ಇಲಾಖೆಯ ಅಧಿಕಾರಿಗಳಾಗಿ ಮುರಳಿ ಶರ್ಮಾ ಹಾಗೂ ಅನುಪಮ್ ಖೇರ್ ನಟಿಸಿದ್ದಾರೆ. ಅವರು ನಾಗೇಶ್ವರ್ ರಾವ್ ಎಂಬಾತನಿಗಾಗಿ ಹುಡುಕಾಟ ನಡೆಸುತ್ತಿದ್ದು ಆತ ಕಳ್ಳ ಯಾಕೆ ಆಗುತ್ತಾನೆ ಎನ್ನುವುದನ್ನು ಮುರಳಿ ಶರ್ಮಾ ಪಾತ್ರ ವಿವರಿಸುವ ಸನ್ನಿವೇಶ ಟೀಸರ್​ನಲ್ಲಿದೆ.

ಸಖತ್ ಮಾಸ್ ಅವತಾರದಲ್ಲಿ ನಟ ರವಿತೇಜ ಟೀಸರ್​ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ರವಿತೇಜರ ಈ ಹಿಂದಿನ ಚಿತ್ರಗಳಿಂತ ಈ ಸಿನಿಮಾದಲ್ಲಿ ಮಾಸ್ ಮಹಾರಾಜ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

70ರ ದಶಕದಲ್ಲಿ ನಡೆವ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಹೈದ್ರಾಬಾದ್ ನ ಸ್ಟುವರ್ಟ್ ಪುರಂ ಹೆಸರಿನ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದೆ. ಈ ಸಿನಿಮಾಕ್ಕಾಗಿ ನಟ ರವಿತೇಜ ತಮ್ಮ ಗೆಟಪ್, ದೇಹ ಭಾಷೆಯನ್ನು ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!