ಹೊಸದಿಗಂತ ವರದಿ,ಮಡಿಕೇರಿ:
ಕಳೆದ ಕೆಲವು ದಿನಗಳಿಂದ ವನ್ಯಜೀವಿಗಳ ಉಪಟಳದಿಂದ ಮುಕ್ತವಾಗಿದ್ದ ದಕ್ಷಿಣ ಕೊಡಗಿನಲ್ಲಿ ಮತ್ತೆ ಹುಲಿ ದಾಳಿಯಾಗಿದೆ. ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದ ಮಲ್ಲಂಗಡ ಧರ್ಮಜ ಎಂಬವರ ಹಸುವೊಂದನ್ನು ಹುಲಿ ಕೊಂದು ಹಾಕಿದೆ.
ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ. ಬಿಜೆಪಿ ಕೃಷಿ ಮೋರ್ಚಾದ ತಾಲೂಕು ಅಧ್ಯಕ್ಷ ಕಟ್ಟೇರ ಈಶ್ವರ ತಿಮ್ಮಯ್ಯ, ಕಾರ್ಯದರ್ಶಿ ಮಲ್ಲಂಗಡ ದಿವಿನ್, ಗ್ರಾ.ಪಂ ಸದಸ್ಯರಾದ ನೂರೇರ ಮನೋಹರ್, ಮುಕ್ಕಾಟಿರ ಪೆಮ್ಮಯ್ಯ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಪ್ರಮುಖರು ಹುಲಿ ಸೆರೆಗೆ ಸಿಸಿ ಕ್ಯಾಮರಾ ಮತ್ತು ಬೋನ್ ಅಳವಡಿಸಬೇಕೆಂದು ಒತ್ತಾಯಿಸಿದರು. ಹಸುವಿನ ಮಾಲಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ತಿಳಿಸಿದರು.
ಅರಣ್ಯ ಇಲಾಖೆ ಸಿಬ್ಬಂದಿಗಳು ಗ್ರಾಮದ ಸುತ್ತಮುತ್ತ ತೀವ್ರ ನಿಗಾ ವಹಿಸಿದ್ದಾರೆ.