ಹೊಸದಿಗಂತ ವರದಿ, ಮಡಿಕೇರಿ:
ಇಲ್ಲಿಗೆ ಸಮೀಪದ ಬೆಟ್ಟತ್ತೂರು ಗ್ರಾಮದಲ್ಲಿ ಹಸುವೊಂದರ ಮೇಲೆ ಹುಲಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.
ಗ್ರಾಮದ ನಿವಾಸಿ ಕುದ್ಕುಳಿ ಶಿವರಾಮ ಎಂಬವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿದ್ದು, ಕೊಟ್ಟಿಗೆಯಿಂದ ಸುಮಾರು 50 ಮೀಟರ್ ದೂರ ಎಳೆದುಕೊಂಡು ಹೋಗಿದೆ.
ಹುಲಿ ಸೆರೆಗೆ ಕ್ರಮ ಕೈಗೊಳ್ಳುವಂತೆ ಹಸುವಿನ ಮಾಲಕ ಕುದ್ಕುಳಿ ಶಿವರಾಮ ಒತ್ತಾಯಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ