January19, 2026
Monday, January 19, 2026
spot_img

ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯ ಸಮೀಪ ಹುಲಿ ಪ್ರತ್ಯಕ್ಷ, ಆತಂಕದಲ್ಲಿ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ ರಸ್ತೆಯ ಮಹದೇಶ್ವರ ದೇವಾಲಯದ ಬಳಿ ಬೆಳ್ಳಂಬೆಳಗ್ಗೆ ಹುಲಿಯೊಂದು ರಸ್ತೆ ಸಮೀಪ ಸಂಚರಿಸಿರುವ ಘಟನೆ ನಡೆದಿದೆ.

ಮೀಣ್ಯಂ ಗ್ರಾಮದಿಂದ ರಾಮಾಪುರ ಕಡೆಗೆ ತೆರಳುತ್ತಿದ್ದ ಬಸ್‌ ಸಮೀಪದಲ್ಲೇ ಹುಲಿ ನಡೆದುಕೊಂಡು ಹೋಗಿರುವುದು ಕಂಡುಬಂದಿದ್ದು, ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಲಕಾಲ ಆತಂಕಗೊಂಡರು. ಇನ್ನು ಕೆಲವರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಈ ದೃಶ್ಯವನ್ನು ಸೆರೆಹಿಡಿದಿದ್ದಾರೆ.

ಇದೇ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಸುಮಾರು ಐದು ತಿಂಗಳ ಹಿಂದೆ ಐದು ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿದ್ದ ಘಟನೆ ನಡೆದಿತ್ತು. ಇದೀಗ ಮತ್ತೊಮ್ಮೆ ಹುಲಿಯ ಚಲನವಲನ ಕಂಡುಬಂದಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹುಲಿ ಮೇಲೆಯೂ ನಿಗಾ ವಹಿಸುವ ಕೆಲಸಕ್ಕೆ ಅರಣ್ಯ ಇಲಾಖೆ ಮುಂದಾಗಬೇಕಿದೆ.

Must Read

error: Content is protected !!