ಹುಲಿ ಉಗುರು ಸಂಕಷ್ಟ: ನಟ ದರ್ಶನ್‌ ಮನೆಗೆ ಅರಣ್ಯಾಧಿಕಾರಿಗಳ ತಂಡ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್‌ ಹುಲಿ ಉಗುರು ಧರಿಸಿದ್ದ ಪ್ರಕರಣದಲ್ಲಿ ಬಂಧನ ಮಾಡಿದ ಬೆನ್ನಲ್ಲಿಯೇ ನಟ ದರ್ಶನ್‌ ತೂಗುದೀಪ ಅವರಿಗೂ ಸಂಕಷ್ಟ ಎದುರಾಗಿದ್ದು, ವಂದೇ ಮಾತರಂ ಸಮಾಜ ಸೇವಾ ಸಂಸ್ಥೆಯಿಂದ ನಟ ದರ್ಶನ್‌ ವಿರುದ್ಧ ದೂರು ದಾಖಲಾದ ಬೆನ್ನಲ್ಲಿಯೇ ಅರಣ್ಯಾಧಿಕಾರಿಗಳು ಬೆಂಗಳೂರಿನ ಆರ್‌.ಆರ್. ನಗರದಲ್ಲಿರುವ ದರ್ಶನ್‌ ಮನೆಗೆ ದಾಳಿ ಮಾಡಿ ಪರಿಶೀಲನೆ ಮಾಡಲು ಮುಂದಾಗಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಹುಲಿ ಉಗುರು ಪತ್ತೆ ಪ್ರಕರಣ ಹಿನ್ನೆಲೆಯಲ್ಲಿ ಹಲವು ಸ್ಯಾಂಡಲ್‌ವುಡ್‌ ನಟರಿಗೆ ಸಂಕಷ್ಟ ಎದುರಾಗಿದೆ. ದರ್ಶನ್ ಮನೆಗೆ ಅರಣ್ಯ ಅಧಿಕಾರಿಗಳು ಎಂಟ್ರಿಕೊಟ್ಟಿದ್ದು, ಹುಲಿ ಉಗುರು ಪತ್ತೆ ಕಾರ್ಯಕ್ಕೆ ಮುಂದಾಗಿದ್ದಾರೆ. ಇನ್ನು ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಬರುತ್ತಿದಂತೆ ಮನೆ ಮುಂದೆ ದರ್ಶನ್ ಕಾರು ಚಾಲಕ ಬಂದಿದ್ದಾನೆ. ಅವರ ಮುಂದೆಯೇ ಮನೆಯೊಳಗೆ ಹೋದ ಅರಣ್ಯಾಧಿಕಾರಿಗಳ ಎರಡು ತಂಡವು ಮನೆಯೊಳಗೆ ಶೋಧ ಕಾರ್ಯ ಮುಂದುವರೆಸಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಫ್ಓ ರವಿಂದ್ರ ಅವರು ಅರಣ್ಯ ಇಲಾಖೆಯಿಂದ ನಾಲ್ಕು ತಂಡ ರಚನೆ ಮಾಡಿದ್ದೇವೆ. ಹುಲಿ ಉಗುರು ಧರಿಸಿದ್ದ ಬಗ್ಗೆ ದೂರು ಬಂದ ಮೇರೆಗೆ ದೂರಿನಲ್ಲಿರುವ ಎಲ್ಲ ಆರೋಪಿಗಳ ಮನೆಗೆ ತೆರಳಿ ನೋಟಿಸ್ ಕೊಟ್ಟಿದ್ದೇವೆ. ಇದಾದ ನಂತರ ನೋಟಿಸ್‌ ಕೊಟ್ಟವರ ಎಲ್ಲರ ಮನೆಗೂ ತೆರಳಿ ತಪಾಸಣೆ ಮಾಡಲಾಗುತ್ತಿದೆ. ಮನೆಗಳ ಪರೀಶೀಲಿಸಿ ಉಗುರು ಪತ್ತೆಯಾದ್ರೆ ಅವರನ್ನ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. ನಟ ದರ್ಶನ್ ಸೇರಿ ಎಲ್ಲಾರ ಮನೆಗೆ ನಮ್ಮ ತಂಡ ತೆರಳಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!