ಹೊಸ ದಿಗಂತ ವರದಿ, ಚಿತ್ರದುರ್ಗ :
ಚಿತ್ರದುರ್ಗ ನಗರದಲ್ಲಿ ಇದೇ ಸೆ.೧೩ ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಶೋಭಾಯಾತ್ರೆಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ೩೮೬೯ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ೩೦ ವಿಶೇಷ ತುಕಡಿಗಳ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಚಿತ್ರದುರ್ಗ ನಗರದಲ್ಲಿ ವ್ಯಾಪಕವಾದ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಚಿತ್ರದುರ್ಗ ಜಿಲ್ಲೆ ಹಾಗೂ ಬೆಂಗಳೂರು ನಗರ ಸೇರಿದಂತೆ ಹೊರಜಿಲ್ಲೆಗಳಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ ೯ ಎಎಸ್‌ಪಿ, ೨೮ ಡಿಎಸ್‌ಪಿ, ೭೮ ಪಿಐ, ೧೭೫ ಪಿಎಸ್‌ಐ, ೪೦೧ ಎಎಸ್‌ಐ, ೨೬೭೮ ಹೆಚ್.ಸಿ, ಪಿಸಿ, ೫೦೦ ಹೋಮ್ ಗಾರ್ಡ್ ಹಾಗೂ ೧೬ ತುಕಡಿಗಳು ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ ಹಾಗೂ ೧೪ ತುಕಡಿಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮತ್ತು ರ್ಯಾಪಿಡ್ ಅಕ್ಷನ್ ಪೋಸ್ಟ್ ನಿಯೋಜಿಸಲು ಕ್ರಮಕೈಗೊಳ್ಳಾಗಿದೆ.
ಬಂದೋಬಸ್ತ್ ಕರ್ತವ್ಯದ ಪ್ರಯುಕ್ತ ನಗರದಾದ್ಯಂತ ಪ್ರಮುಖ ೧೫೧ ಸ್ಥಳಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳು ಮತ್ತು ೨೬ ಕಣ್ಗಾವಲು ವೇದಿಕೆ (Wಚಿಣಛಿh ಖಿoತಿeಡಿ) ಗಳನ್ನು ನಿರ್ಮಿಸಲಾಗಿದ್ದು, ಮೆರವಣಿಗೆ ಮಾರ್ಗದಲ್ಲಿನ ವೀಡಿಯೋ ಚಿತ್ರೀಕರಣಕ್ಕೆಂದು ೬೭ ವಿಡಿಯೋ ಕ್ಯಾಮೆರಾಗಳೊಂದಿಗೆ ಸಿಬ್ಬಂದಿಯವರನ್ನು ನಿಯೋಜಿಸಲಾಗಿರುತ್ತದೆ. ಶೋಭಾಯಾತ್ರೆ ಸಾಗುವ ಮಾರ್ಗದಲ್ಲಿನ ಎತ್ತರದ ಕಟ್ಟಡಗಳ ಮೇಲೆ ೪೯ ಸ್ಕೈ ಸೆಂಟ್ರಿಗಳನ್ನು ನಿಯೋಜಿಸಲಾಗಿರುತ್ತದೆ. ಅಲ್ಲದೇ ೦೮ ದ್ರೋಣ್ ಕ್ಯಾಮೆರಾಗಳನ್ನು ನಿಯೋಜಿಸಲಾಗಿರುತ್ತದೆ.
ಶೋಭಾಯಾತ್ರೆ ಮಾರ್ಗದಲ್ಲಿ ಅಳವಡಿಸಲಾಗಿರುವ ಸಿ.ಸಿ.ಕ್ಯಾಮೆರಾಗಳಲ್ಲಿನ ದೃಶ್ಯಾವಳಿಗಳನ್ನು ದಿನದ ೨೪ ಗಂಟೆಗಳ ಕಾಲ ಒಂದೇ ಕಡೆ ವೀಕ್ಷಿಸುವ ಸಲುವಾಗಿ ಎಸ್.ಜೆ.ಎಂ. ಡೆಂಟಲ್ ಕಾಲೇಜ್‌ನಲ್ಲಿ ಕಮಾಂಡ್ ಸೆಂಟರ್ ತೆರೆಯಲಾಗಿರುತ್ತದೆ. ಬಂದೋಬಸ್ತ್‌ನ ಸೆಕ್ಟರ್ ಅಧಿಕಾರಿಗಳ ಸಂವಹನಕ್ಕಾಗಿ ಹೆಚ್ಚುವರಿ ಕಂಟ್ರೋಲ್ ರೂಂ ತೆರೆಯಲಾಗಿರುತ್ತದೆ. ಶೋಭಾಯಾತ್ರೆಗೆ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಂಬಂಧವಾಗಿ ೦೩ ಸೆಕ್ಟರಲ್ ಮ್ಯಾಜಿಸ್ಟ್ರೇಟ್‌ಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ. ಶೋಭಾಯಾತ್ರೆಯ ಹಿನ್ನಲೆಯಲ್ಲಿ ಸೆ.೧೩ರಂದು ಚಿತ್ರದುರ್ಗ ನಗರದಲ್ಲಿ ಸಂಚರಿಸಲಿರುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.