Friday, September 29, 2023

Latest Posts

ತಿಲಕ್ ವರ್ಮಾ ಎಚ್ಚರಿಕೆಯ ಬ್ಯಾಟಿಂಗ್: ವೆಸ್ಟ್ ಇಂಡೀಸ್ ಗೆಲುವಿಗೆ ಸಾಧಾರಣ ಟಾರ್ಗೆಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವೆಸ್ಟ್ ಇಂಡೀಸ್​ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೋತ ಟೀಮ್ ಇಂಡಿಯಾ ಎರಡನೇ ಪಂದ್ಯದಲ್ಲಿ ಗೆಲುವಿನ ವಿಶ್ವಾಸದಲ್ಲಿ ಬ್ಯಾಟಿಂಗ್ ಇಳಿದಿದ್ದು, ಸಾಧಾರಣ ಮೊತ್ತ ಪೇರಿಸಿದೆ.

ಟಾಸ್ ಗೆದ್ದ ನಾಯಕ ಹಾರ್ದಿಕ್ ಪಾಂಡ್ಯ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಕೇವಲ 7 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಸೂರ್ಯಕುಮಾರ್ ಯಾದವ್ (1) ರನ್ ಕದಿಯುವ ಯತ್ನದಲ್ಲಿ ರನೌಟ್ ಆಗಿ ನಿರ್ಗಮಿಸಿದರು.
ಮತ್ತೊಂದೆಡೆ ಕ್ರೀಸ್​ ಕಚ್ಚಿ ನಿಂತಿದ್ದ ಇಶಾನ್ ಕಿಶನ್ 27 ರನ್​ ಗಳಿಸಿದರು. ಇತ್ತ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು.

ಆದರೆ ಸಂಜು ಸ್ಯಾಮ್ಸನ್ (7) ಸ್ಟಂಪ್ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು. ಇದಾಗ್ಯೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ತಿಲಕ್ ವರ್ಮಾ 39 ಎಸೆತಗಳಲ್ಲಿ ತಮ್ಮ ಚೊಚ್ಚಲ ಅರ್ಧಶತಕ ಪೂರೈಸಿದರು.ತಿಲಕ್ ವರ್ಮಾ (51 ರನ್, 41 ಎಸೆತ) ಬೌಂಡರಿ ಲೈನ್​ನಲ್ಲಿ ಕ್ಯಾಚಿತ್ತು ಹೊರ ನಡೆದರು.

ಅಂತಿಮ ಓವರ್​ಗಳ ವೇಳೆ ಜೊತೆಯಾದ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಕೂಡ ರನ್​ಗಳಿಸಲು ತಡಕಾಡಿದರು. ಅಲ್ಲದೆ 18 ಎಸೆತಗಳಲ್ಲಿ 24 ರನ್​ಗಳಿಸಿದ ಪಾಂಡ್ಯ ಅಲ್ಝಾರಿ ಜೋಸೆಫ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.
ಹಾಗೆಯೇ 20ನೇ ಓವರ್​ನ ಮೊದಲ ಎಸೆತದಲ್ಲೇ ಅಕ್ಷರ್ ಪಟೇಲ್ (14) ಕೂಡ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಟೀಮ್ ಇಂಡಿಯಾ ಮೊತ್ತ 7 ವಿಕೆಟ್ ನಷ್ಟಕ್ಕೆ 152 ಕ್ಕೆ ಬಂದು ನಿಂತಿತು. ಅದರಂತೆ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಗೆಲ್ಲಲು 120 ಎಸೆತಗಳಲ್ಲಿ 153 ರನ್​ ಕಲೆಹಾಕಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!