ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಬಹು ಜನಪ್ರಿಯ ಯೋಜನೆ ಗೃಹಲಕ್ಷ್ಮಿಗೆ ಚಾಲನೆ ಸಿಕ್ಕಿದ್ದು, ಈವರೆಗೂ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ.
ಇದುವರೆಗೂ ಒಟ್ಟಾರೆ 1.08 ಕೋಟಿ ಅರ್ಜಿ ಸಲ್ಲಿಕೆಯಾಗಿದೆ. ಆಗಸ್ಟ್ 15ರಂದು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಕೈಗೆ ಸಿಗುತ್ತದೆ ಎಂದು ಹೇಳಲಾಗಿತ್ತು. ಆದರೆ ಆಗಸ್ಟ್ ಕೊನೆಯಲ್ಲಿ ಹಣ ತಲುಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.