ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿಗೂ ಮುನ್ನ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರವಿ, ಸಿದ್ದರಾಮಯ್ಯ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಆಗಿದೆ. ದೀಪಾವಳಿಯೊಳಗೆ ಪತನವಾಗಲಿದೆ ಎಂದು ಹೇಳಿದ್ದಾರೆ.
ದೀಪಾವಳಿಯೊಂದಿಗೆ ಸರ್ಕಾರ ಬಂದ್ ಆಗಲಿದೆ. ಹೊಸ ಸಿಎಂ ಮತ್ತು ಸರ್ಕಾರವನ್ನು ಸಮಯ ಮಾತ್ರ ನಿರ್ಧರಿಸುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯ ರಾಜೀನಾಮೆಗೆ ಅವರ ಪಕ್ಷದವರೇ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಹತ್ತಕ್ಕೂ ಹೆಚ್ಚು ಸಿಎಂ ಆಕಾಂಕ್ಷಿಗಳು ಇದ್ದಾರೆ ಸರ್ಕಾರ ಪತನವಾಗಲಿದೆ ಎಂದರು.