ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬಹುನಿರೀಕ್ಷಿತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.
ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಿ ಫಲಿತಾಂಶವನ್ನು ನೋಡಬಹುದು.
ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಪ್ರಥಮ ಭಾಷೆಯ ಪತ್ರಿಕೆ, ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕೃತದೊಂದಿಗೆ ಪ್ರಾರಂಭವಾಯಿತು. ಏಪ್ರಿಲ್ 8 ರಂದು ಜೆಟಿಎಸ್ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳು ನಡೆದಿದ್ದವು.
ಪರೀಕ್ಷೆಗಾಗಿ ವರ್ಷಗಳಿಂದಲೇ ತಯಾರಾದ ಮಕ್ಕಳೂ ಇದ್ದಾರೆ, ನಾನು ಫಸ್ಟ್ ಬರಬೇಕು ಎಂದು ಆಸೆ ಪಟ್ಟ ಮಕ್ಕಳಿದ್ದಾರೆ. ಹಿಂದಿನ ದಿನ ಪರೀಕ್ಷೆಗೆಂದೇ ಓದಿದವರೂ ಇದ್ದಾರೆ, ಇದೆಲ್ಲದರ ಮಧ್ಯದಲ್ಲಿ ಇದ್ದವರೂ ಇದ್ದಾರೆ. ಎಲ್ಲ ಮಕ್ಕಳಿಗೂ ಆಲ್ ದಿ ಬೆಸ್ಟ್. ರಿಸಲ್ಟ್ ಏನೇ ಇರಲಿ ಸಮನಾಗಿ ಸ್ವೀಕರಿಸಿ.. ಪಾಸಾಗಲಿ, ಫೇಲಾಗಲಿ ಜೀವನ ಇದ್ದೇ ಇದೆ..