ನಮ್ಮ ಹೊಸ ಅಧ್ಯಾಯದ ಸಮಯ: ಇನ್ಮುಂದೆ ‘ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು’!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅನ್‌ಬಾಕ್ಸ್‌ ಕಾರ್ಯಕ್ರಮದಲ್ಲಿ ಆರ್‌ಸಿಬಿ ತನ್ನ ಹೆಸರಿನಲ್ಲಿ ಬದಲಾವಣೆ ಮಾಡಿಕೊಂಡಿದ್ದು, ‘ರಾಯಲ್‌ ಚಾಲೆಂಜರ್ಸ್‌ ಬೆಂಗಳೂರ್‌’ ಇನ್ಮುಂದೆ ‘ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು’ ಆಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಂಗಳವಾರ ಆರ್‌ಸಿಬಿ ತಂಡದ ಅನ್‌ಬಾಕ್ಸ್‌ ಕಾರ್ಯಕ್ರಮ ನಡೆಯಿತು. ಈ ವೇಳೆ ಆರ್‌ಸಿಬಿ ಹೆಸರಿನಲ್ಲಿ ‘ಬೆಂಗಳೂರ್‌’ ಪದವನ್ನು ತೆಗೆದು ‘ಬೆಂಗಳೂರು’ ಎಂದು ಬದಲಾಯಿಸಿಕೊಂಡಿದೆ.ಜೊತೆಗೆ ಹೊಸ ಜೆರ್ಸಿಯನ್ನು ಪರಿಚಯಿಸಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಆರ್‌ಸಿಬಿ, ‘ನಾವು ಪ್ರೀತಿಸುವ ನಗರ, ನಾವು ಸ್ವೀಕರಿಸುವ ಪರಂಪರೆ ಮತ್ತು ಇದು ನಮ್ಮ ಹೊಸ ಅಧ್ಯಾಯದ ಸಮಯ. ನಿಮಗೆ ಪ್ರಸ್ತುತಪಡಿಸಲಾಗುತ್ತಿದೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿಮ್ಮ ತಂಡ, ನಿಮ್ಮ RCB!’ ಎಂದು ಬರೆದುಕೊಂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!