Friday, March 24, 2023

Latest Posts

ಬಿಜೆಪಿ ವಿರುದ್ಧ ಹೋರಾಡುವ ಸಮಯ ಬಂದಿದೆ: ಕಾರ್ಯಕರ್ತರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಕರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಲೋಕಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳು ಒಂದಾಗುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಕಾಂಗ್ರೆಸ್‌ನ 85 ನೇ ಸರ್ವಸದಸ್ಯರ ಅಧಿವೇಶನವನ್ನುದ್ದೇಶಿಸಿ(85th plenary session of the Congress) ಮಾತನಾಡಿದ ಪ್ರಿಯಾಂಕಾ, ಪಕ್ಷದ ಸಂದೇಶ ಮತ್ತು ಸರ್ಕಾರದ ವೈಫಲ್ಯಗಳನ್ನು ಜನರ ಬಳಿಗೆ ಕೊಂಡೊಯ್ಯುವಂತೆ ಅವರು ಕಾಂಗ್ರೆಸ್ (Congress) ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ನಮಗೆ ಒಂದು ವರ್ಷ ಮಾತ್ರ ಉಳಿದಿದೆ, ನಮ್ಮಲ್ಲಿ (ವಿರೋಧ) ನಿರೀಕ್ಷೆಗಳಿವೆ, ನಾವು ಒಂದಾಗಬೇಕಿದೆ. ಎಲ್ಲಾ ವಿರೋಧ ಪಕ್ಷಗಳು ಮತ್ತು ಬಿಜೆಪಿ ಸಿದ್ಧಾಂತವನ್ನು ವಿರೋಧಿಸುವ ಜನರು ಒಗ್ಗಟ್ಟಿನಿಂದ ಹೋರಾಡಬೇಕು. ಪ್ರತಿಯೊಬ್ಬರಿಂದಲೂ ನಿರೀಕ್ಷೆಗಳಿವೆ. ಆದರೆ ಕಾಂಗ್ರೆಸ್ ನಿಂದ ಹೆಚ್ಚಿನ ನಿರೀಕ್ಷೆಗಳು ಇವೆ ಎಂದಿದ್ದಾರೆ.

ಅದೇ ವೇಳೆ ಕಾರ್ಯಕರ್ತರನ್ನು ಹೊಗಳಿದ ಪ್ರಿಯಾಂಕಾ, ನಿಮಗೆ ಬಿಜೆಪಿ ವಿರುದ್ಧ ಹೋರಾಡುವ ಧೈರ್ಯವಿದೆ ಎಂದು ನಮಗೆ ತಿಳಿದಿದೆ, ದೇಶಕ್ಕಾಗಿ ಆ ಧೈರ್ಯವನ್ನು ಪ್ರದರ್ಶಿಸುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!