ಹಳೇ ತಲೆಗಳನ್ನು ಮನೆಗೆ ಕಳಿಸೋ ಸಮಯ ಬಂದಾಗಿದೆ : ಪ್ರತಾಪ್ ಸಿಂಹ

ಹೊಸದಿಗಂತ ವರದಿ  ಮೈಸೂರು:

ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಳೆಯ ತಲೆಗಳನ್ನು ಜನರು ಸೋಲಿಸಿ ಮನೆಗೆ ಕಳುಹಿಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ವರುಣಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ನವರ ಕೊಡುಗೆ ಏನು? ಈ ಕ್ಷೇತ್ರಕ್ಕೆ ವ್ಯಕ್ತಿತ್ವ ಇಲ್ಲದಂತಾಗಿದೆ.ಇಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಈ ಕ್ಷೇತ್ರವನ್ನು ತಾಲೂಕು ಕೇಂದ್ರ ಮಾಡಿ, ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರು.

ವರುಣಾಗೂ ಸೋಮಣ್ಣಗೂ ಏನು ಸಂಬಂಧ ಎಂದು ಸಿದ್ದರಾಮಯ್ಯ ಪ್ರಶ್ನಿಸುತ್ತಿದ್ದಾರೆ. ಬಾದಾಮಿಗೂ ಸಿದ್ದರಾಮಯ್ಯರಿಗೂ ಏನು ಸಂಬಂಧ, ಕೇರಳದ ವೈನಾಡಿಗೂ ರಾಹುಲ್ ಗಾಂಧಿಗೂ ಏನು ಸಂಬಂಧ, ಇಂದಿರಾಗಾಂಧಿಗೂ ಚಿಕ್ಕಮಗಳೂರಿಗೂ ಏನು ಸಂಬಂಧ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ನವರು ಜಾತಿವಾದಿಗಳು ಅವರನ್ನು ಈ ಚುನಾವಣೆಯಲ್ಲಿ ಮಟ್ಟ ಹಾಕಿ, ಬಿಜೆಪಿ ಯನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!