ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಎಂಟು ತಿಂಗಳು ಕಳೆದಿವೆ. ಸರ್ಕಾರವು ಪ್ರಸ್ತುತ ಐದು ಖಾತರಿ ಯೋಜನೆಗಳನ್ನು ಹೊಂದಿದೆ. ಆದರೆ, ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಇನ್ನೂ ಮುಗಿದಿಲ್ಲ.
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಇನ್ನು ಎರಡೂವರೆ ವರ್ಷದಲ್ಲಿ ಸಿಎಂ ಆಗುತ್ತಾರೆ ಎಂದು ಅವರ ಕಿರಿಯ ಸಹೋದರ, ಸಂಸದ ಡಿ.ಕೆ.ಸುರೇಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಸಹಜವಾಗಿ ಎಲ್ಲರೂ ಕನಸು ಕಾಣುತ್ತಾರೆ. ಕನಸು ನನಸಾಗುವ ಸಮಯ ಬಂದೇ ಬರುತ್ತದೆ. ಅದೇ ರೀತಿ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ ಹೊಂದಿದ್ದಾರೆ. ಈ ಸಮಯಕ್ಕಾಗಿ ನಾವು ಕಾಯಬೇಕಾಗಿದೆ. ಸಮಯ ಬರುವವರೆಗೆ ಕಾಯೋಣ ಎಂದು ಅವರು ತಿಳಿಸಿದ್ದಾರೆ.