ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶಾಲಾ ಬಸ್ಗೆ ಟಿಪ್ಪರ್ ಡಿಕ್ಕಿ ಹೊಡೆದು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.
ಕೊಲ್ಹಾಪುರದಿಂದ ಬಂದಿದ್ದ ವಿದ್ಯಾರ್ಥಿಗಳು ರಾಣಿ ಚೆನ್ನಮ್ಮ ಮೃಗಾಲಯಕ್ಕೆ ಭೇಟಿ ನೀಡಿದ್ದರು. ಬಳಿಕ ಮೃಗಾಲಯದಿಂದ ವಾಪಸಾಗುತ್ತಿದ್ದಾಗ ಅವಘಡ ಸಂಭವಿಸಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಬಿಮ್ಸ್ ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.