ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಕಲ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ 12 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಾಮಾಕ್ಷಿಪಾಳ್ಯದ ನಿವಾಸಿ ಶಶಾಂಕ್ (12) ಮೃತ ದುರ್ದೈವಿ. ಸಣ್ಣಾಕಿಬೈಲಿನ ಗಣಪತಿ ದೇವಾಲಯ ರಸ್ತೆಯಲ್ಲಿ ತನ್ನ ಸ್ನೇಹಿತನ ಭೇಟಿಗೆ ಸೈಕಲ್‌ನಲ್ಲಿ ಶಶಾಂಕ್ ತೆರಳುವಾಗ ಈ ಘಟನೆ ನಡೆದಿದೆ.
ಅಪಘಾತದ ಬಳಿಕ ವಾಹನ ಬಿಟ್ಟು ಪರಾರಿಯಾಗಿರುವ ಟಿಪ್ಸರ್‌ಲಾರಿ ಚಾಲಕನ ಪತ್ತೆಗೆ ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಶಶಾಂಕ್, ಶಾಲೆ ಮುಗಿದ ಬಳಿಕ ಸಂಜೆ ತನ್ನ ಗೆಳೆಯನ ಭೇಟಿಗೆ ತೆರಳುತ್ತಿದ್ದ. ಈ ವೇಳೆ ಟಿಪ್ಪ ರ್‌ಲಾರಿ ಸೈಕಲ್‌ಗೆ ಡಿಕ್ಕಿಯಾಗಿದೆ. ಆಗ ಕೆಳಗೆ ಬಿದ್ದ ಶಶಾಂಕ್ ಮೇಲೆ ಟಿಪ್ಪರ್ ಚಕ್ರಗಳು ಹರಿದಿದ್ದು, ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಏತನ್ಮಧ್ಯೆ ದೇವನಹಳ್ಳಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರೊಬ್ಬ ಸಾವನ್ನಪ್ಪಿ, ಇತರೆ ಐವರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.