ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ: ಅಪಘಾತದಲ್ಲಿ ಶಾಲಾ ಶಿಕ್ಷಕ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಬಳಿ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಮಕರಬ್ಬಿ ಸರ್ಕಾರಿ ಶಾಲಾ ಶಿಕ್ಷಕ ಮಹಾಂತೇಶ್ ಗೌಡ (37) ಮೃತ ದುರ್ದೈವಿ.

ಮಹಾಂತೇಶ್ ಗೌಡ ಬೈಕ್‌ನಲ್ಲಿ ಶಾಲೆಗೆ ತೆರಳುತ್ತಿದ್ದರು. ಈ ವೇಳೆ ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಶಿಕ್ಷಕ ಮಹಾಂತೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಿರೇಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಮ್ಮ ಪ್ರೀತಿಯ ಶಿಕ್ಷಕ ಸಾವನ್ನಪ್ಪಿದ ಸುದ್ದಿ ತಿಳಿದು ವಿದ್ಯಾರ್ಥಿಗಳು ಕಣ್ಣೀರಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!