ಹೊಸದಿಗಂತ ಡಿಜಿಟಲ್ ಡೆಸ್ಕ್
ಲಡಾಖ್‌ನ ಸಾಸೋಮಾ-ಸಾಸರ್ ಲಾ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ (ಜಿಆರ್‌ಇಎಫ್) ಟಿಪ್ಪರ್ ಟ್ರಕ್ ಕಮರಿಗೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. “ಲಡಾಖ್ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವಾಗ ನಿನ್ನೆ 12 ಜನರಿದ್ದ ಟಿಪ್ಪರ್ ಪಲ್ಟಿಯಾಗಿದೆ. ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಟಿಪ್ಪರ್ ದುರಂತದಲ್ಲಿ ಆದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
“ಲಡಾಖ್‌ನ ಸಾಸೋಮಾ-ಸಾಸರ್ ಲಾ ಪ್ರದೇಶದಲ್ಲಿ ಜಿಆರ್‌ಇಎಫ್ ಟಿಪ್ಪರ್ ಉರುಳಿಬಿದ್ದ ಕಾರಣ ಅಮೂಲ್ಯ ಜೀವಗಳ ನಷ್ಟದಿಂದ ತೀವ್ರ ನೋವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ಸಿಂಗ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ