ಶ್ರೀರಂಗಪಟ್ಟಣದಲ್ಲಿ ಇಂದು ಟಿಪ್ಪು ಜಯಂತಿ ಆಚರಣೆ: ನಿಷೇಧಾಜ್ಞೆ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀರಂಗಪಟ್ಟಣದಲ್ಲಿ ಇಂದು ಟಿಪ್ಪು ಜಯಂತಿ ಆಚರಣೆ ಮಾಡಲಿದ್ದು, ಕೋಮುಸಂಘರ್ಷದ ಭೀತಿ ಎದುರಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಶ್ರೀರಂಗಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಟಿಪ್ಪು ವಕ್ಫ್ ಎಸ್ಟೇಟ್‌ನಿಂದ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ, ಕಾರ್ಯಕ್ರಮಕ್ಕೆ ಮಂಡ್ಯ, ಮೈಸೂರು ಸೇರಿ ಹಲವು ಜಿಲ್ಲೆಗಳಿಂದ ಜನರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಈ ಕಾರಣದಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಆದೇಶ ಹೊರಡಿಸಿದ್ದಾರೆ.

ಮೆರವಣಿಗೆ ಹಾಗೂ ಪ್ರತಿಭಟನೆಗೆ ನಿರ್ಬಂಧವಿದ್ದು, ಬ್ಯಾನರ್, ಧ್ವನಿವರ್ಧಕ, ಪಟಾಕಿ ಹಾಗೂ ಡಿಜೆ ಬಳಕೆಯನ್ನು ನಿಷೇಧ ಮಾಡಲಾಗಿದೆ.

ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು ೨೦೧೯ರಲ್ಲೇ ನಿಲ್ಲಿಸಲಾಗಿದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆಯೂ ಆಚರಣೆ ರದ್ದತಿ ಆದೇಶ ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಅಧಿಕೃತವಾಗಿ ಟಿಪ್ಪು ಜಯಂತ ಆಚರಣೆ ಇಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!