ಐದು ಲಕ್ಷ ಮುಸ್ಲಿಮ್ ಮನೆ, ಮದರಸಾ, ದರ್ಗಾಗಳಲ್ಲಿ ದಿನಪೂರ್ತಿ ಹಾರಾಡಲಿದೆ ತಿರಂಗ!!

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ದೇಶದಾದ್ಯಂತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಳೆಗಟ್ಟಿದ್ದು, ಇದರ ನಡುವೆಯೇ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಆ. 15 ರಂದು ಐದು ಲಕ್ಷ ಮುಸ್ಲಿಂ ಮನೆಗಳು, ಮದರಾಸ, ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಉತ್ತರ ಪ್ರದೇಶ ಬಿಜೆಪಿ ಸಿದ್ಧತೆ ಅರಂಭಿಸಿದೆ.
ಮುಸ್ಲಿಂ ಮೋರ್ಚಾ ಸಾರಥ್ಯದಲ್ಲಿ ಆಗಸ್ಟ್ 12 ರಿಂದ ಮೂರು ದಿನಗಳ ಕಾಲ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಕುನ್ವರ್ ಬಸಿತ್ ಅಲಿ, ಮದರಸಾ, ದರ್ಗಾಗಳಲ್ಲಿ ಹೆಚ್ಚಿನ ಜನ ಸೇರುವುದರಿಂದ ದೇಶ ಪ್ರೇಮದ ಸಂದೇಶ ಹರಡಲು ನೆರವಾಗುತ್ತದೆ. ಈ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದಿದ್ದಾರೆ.

ಇನ್ನು ಮದರಸಾ, ದರ್ಗಾಗಳಲ್ಲಿ ಧ್ವಜಾರೋಹಣ ಮಾಡುವ ಫೋಟೋಗಳನ್ನು ಕ್ಲಿಕ್ ಮಾಡಿ ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವಂತೆ ಬಿಜೆಪಿ ಅಲ್ಪಸಂಖ್ಯಾತ ಘಟಕ ಮನವಿ ಕೂಡಾ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!