ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಉಗ್ರರ ಮೇಲಿನ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ತಿರಂಗ ಯಾತ್ರೆ ನಡೆಸಲಿದೆ. ನಾಳೆ ಬೆಂಗಳೂರಿನಲ್ಲಿ ಯಾತ್ರೆ ಪ್ರಾರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿಂದು ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ದೇಶದ ಜನರನ್ನು ಒಗ್ಗೂಡಿಸುವ ಸಲುವಾಗಿ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ತಿರಂಗ ಯಾತ್ರೆ ನಡೆಸಬೇಕು ಎಂದು ತಿಳಿಸಿದ್ದಾರೆ. ಈ ಮೂಲಕ ಸೈನಿಕರಿಗೆ ಆತ್ಮಸ್ಥೈರ್ಯ ತುಂಬಲು ಸೂಚಿಸಿದ್ದಾರೆ. ತಿರಂಗ ಯಾತ್ರೆಯನ್ನು ರಾಜಕೀಯೇತರವಾಗಿ ಆಯೋಜನೆ ಮಾಡಲಾಗುತ್ತಿದೆ ಎಂದರು.