Friday, January 9, 2026

SHOCKING | ತಮಿಳುನಾಡು ಸಿಎಂ ಸ್ಟಾಲಿನ್‌ ಸಂಚರಿಸುತ್ತಿದ್ದ ಕಾರ್‌ನ ಟೈರ್‌ ಸ್ಫೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಸಂಚರಿಸುತ್ತಿದ್ದ ಕಾರ್‌ನ ಟೈರ್‌ ಸ್ಫೋಟಗೊಂಡಿದ್ದು, ಅದೃಷ್ಟವಶಾತ್‌ ಯಾವುದೇ ಅಪಾಯವಿಲ್ಲದೆ ಸುರಕ್ಷಿತರಾಗಿದ್ದಾರೆ.

ದಿಂಡಿಗಲ್‌ನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅವರು ಮುಧುರೈ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರನ್ನೂ ಕೂಡಲೇ ಮತ್ತೊಂದು ವಾಹನದಲ್ಲಿ ಕರೆದೊಯ್ಯಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

‘ದಿಂಡಿಗಲ್‌ನಲ್ಲಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಟಾಲಿನ್‌ ಹಲವು ಯೋಜನೆಗಳಿಗೆ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಿ, ಅಧಿಕ ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರಿಗೆ ಸವಲತ್ತುಗಳನ್ನು ವಿತರಿಸಿ ಹಿಂದಿರುಗುತ್ತಿದ್ದರು. ಆ ವೇಳೆ ವಾಹನ ಟೈರ್‌ ಸ್ಫೋಟಗೊಂಡಿತು’ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

‘ಇದು ಟೈರ್‌ಗೆ ಸಂಬಂಧಿಸಿದ ಸಮಸ್ಯೆ. ಸ್ಟಾಲಿನ್‌ ಅವರನ್ನು ಕೂಡಲೇ ಮತ್ತೊಂದು ಕಾರ್‌ಗೆ ಸ್ಥಳಾಂತರಿಸಲಾಯಿತು. ಅವರಿಗೆ ಯಾವುದೇ ಅಪಾಯವಾಗಿಲ್ಲʼಎಂದು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

error: Content is protected !!