ಹೊಸದಿಂಗತ ಡಿಜಿಟಲ್ ಡೆಸ್ಕ್:
ಟೈರ್ ಸ್ಫೋಟಗೊಂಡು ಮಹೀಂದ್ರಾ ಪಿಕಪ್ ವಾಹನ ಪಲ್ಟಿಯಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ನಡೆದಿದೆ.
ಐವರು ಮಹಿಳೆಯರು ಗಂಭೀರ ಗಾಯಗೊಂಡಿದ್ದು, 20 ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮಹೀಂದ್ರಾ ಪಿಕಪ್ ವಾಹನದಲ್ಲಿ 40 ಕ್ಕೂ ಅಧಿಕ ಮಹಿಳೆಯರು ಕೂಲಿಗೆ ತೆರಳುತ್ತಿದ್ದರು. ಈ ವೇಳೆ ಟೈರ್ ಸ್ಫೋಟಗೊಂಡ ತಕ್ಷಣ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡವರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.