ಎಕ್ಸ್‌ ಬಾಯ್‌ಫ್ರೆಂಡ್‌ ಕಿರುಕುಳಕ್ಕೆ ಬೇಸತ್ತು ಹಸೆಮಣೆ ಏರಬೇಕಿದ್ದ ಶಿಕ್ಷಕಿ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎಕ್ಸ್‌ ಬಾಯ್‌ಫ್ರೆಂಡ್‌ ಬ್ಲ್ಯಾಕ್‌ಮೇಲ್‌ನಿಂದ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.

ಸೈರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ಮದುವೆಗೆ ಇನ್ನೂ ಕೇವಲ 8 ದಿನ ಬಾಕಿ ಇರುವಾಗಲೇ ಸೈರಾಬಾನು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಭಾನುವಾರ ಸೈರಾಬಾನು ಪೋಷಕರು ಮದುವೆ ಸಾಮಗ್ರಿಗಳನ್ನು ತರಲು ಪೇಟೆಗೆ ಹೋಗಿದ್ದರು. ಪೋಷಕರು ಮರಳಿ ಬರುವಷ್ಟರಲ್ಲಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ 5 ವರ್ಷಗಳಿಂದ ಸೈರಾಬಾನು, ಮೈಲಾರಿ ಎಂಬಾತನನ್ನು ಪ್ರೀತಿ ಮಾಡುತ್ತಿದ್ದರು. ಆದರೆ ಕೆಲ ದಿನಗಳ ಹಿಂದೆ ಲವ್ ಬ್ರೇಕಪ್ ಆಗಿತ್ತು. ಬ್ರೇಕಪ್ ಬಳಿಕ ಪೋಷಕರ ಒತ್ತಾಯದ ಮೇರೆಗೆ ಸೈರಾಬಾನು ಬೇರೆ ಮದುವೆಗೆ ಒಪ್ಪಿಕೊಂಡಿದ್ದರು. ಆದರೆ ಸೈರಾಬಾನು ಮದುವೆ ತಯಾರಿ ನೋಡಿ ಲವರ್ ಮೈಲಾರಿ ಟಾರ್ಚರ್ ಶುರುವಾಗಿತ್ತು. ಬೇರೆ ಮದುವೆ ಆದರೆ ಇಬ್ಬರ ಫೋಟೋ ಹಾಗೂ ವೀಡಿಯೋಗಳನ್ನು ವೈರಲ್ ಮಾಡುತ್ತೇನೆ ಎಂದು ಆತ ಬೆದರಿಕೆ ಹಾಕ್ತಿದ್ದ ಎಂಬ ಆರೋಪವಿದೆ. ಸೈರಾಬಾನು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಶರಣಾಗಿದ್ದಾರೆ ಎಂಬ ಶಂಕ ವ್ಯಕ್ತವಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!