SHOCKING NEWS | ಕೊಡಗಿನಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾದ ಅನ್ನದಾತ

ಹೊಸದಿಗಂತ ವರದಿ ಸೋಮವಾರಪೇಟೆ:

ಸಾಲ ಬಾಧೆಗೆ ಒಳಗಾಗಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರಪೇಟೆ ತಾಲೂಕಿನ ಆಲೂರುಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಗುತ್ತಿ ಗ್ರಾಮದಲ್ಲಿ ನಡೆದಿದೆ.

ಹೊಸಗುತ್ತಿಯ ಮಜೀದ್(45) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ರೈತ.
ಬುಧವಾರ ಬೆಳಗಿನ ಜಾವ ತಮ್ಮ ಮನೆಯೊಳಗೆ ಕೋವಿಯಿಂದ ಗುಂಡು ಹಾರಿಸಿಕೊಂಡ ಮಜೀದ್ ಅವರನ್ನು ತಕ್ಷಣ ಅರಕಲಗೂಡು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಿ ಅವರು ಸಾವಿಗೀಡಾಗಿದ್ದರೆನ್ನಲಾಗಿದೆ.
ರೈತ ಮಜೀದ್ ಅವರು ವಿವಿಧ ಬ್ಯಾಂಕ್ ಹಾಗೂ ಇತರರಿಂದ ಕೈಸಾಲ ಪಡೆದುಕೊಂಡಿದ್ದರೆನ್ನಲಾಗಿದ್ದು, ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರು ಪತ್ನಿ ಹಾಗೂ ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರರನ್ನು ಅಗಲಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!