ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಂಡತಿ ಹಾಗೂ ಮಾವನ ಕಿರುಕುಳದಿಂದ ಬೇಸತ್ತು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಹೆಚ್.ಸಿ.ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡ ಹೆಡ್‌ಕಾನ್‌ಸ್ಟೇಬಲ್. ನನ್ನ ಸಾವಿಗೆ ನನ್ನ ಹೆಂಡತಿ ಮತ್ತು ಮಾವ ಕಾರಣ ಎಂದು ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಸಿವಿ ರಾಮನ್ ನಗರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ತಿಪ್ಪಣ್ಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೇಬಲ್ ಆಗಿ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ಸಂಬಂಧ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.