ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್‌ಗೆ ಸಂಬಂಧಿಸಿದಂತೆ ನಟ ದರ್ಶನ್ ಕೆಲವು ಸತ್ಯಗಳನ್ನು ಬಾಯ್ಬಿಟ್ಟಿದ್ದಾರೆ.
ಕೊಲೆಯಾದ ರೇಣುಕಾಸ್ವಾಮಿ ಮೃತದೇಹವನ್ನು ವಿಲೇವಾರಿ ಮಾಡುವಂತೆ ಹಾಗೂ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಇರಿ ಎಂದು ದರ್ಶನ್ ಸೂಚನೆ ನೀಡಿದ್ದರಂತೆ, ಜೊತೆಗೆ ಪೊಲೀಸ್, ಲಾಯರ್, ಶವ ಸಾಗಿಸೋ ವ್ಯಕ್ತಿಗಳಿಗೆ ದರ್ಶನ್ ಹಣ ನೀಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಪ್ರದೋಶ್ಗೆ 30 ಲಕ್ಷ ಹಣ ನೀಡಿದ್ದಾಗಿ ಪೊಲೀಸರ ಮುಂದೆ ಹೇಳಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಬಳಿಕ ಎರಡೆರಡು ಕಡೆ ಪಾರ್ಟಿ ಮಾಡಲಾಗಿದೆ. ಜೂನ್ 8ರ ರಾತ್ರಿ ಎರಡು ತಂಡಗಳಾಗಿ ಬೇರೆ ಬೇರೆ ಕಡೆ ಪಾರ್ಟಿ ಮಾಡಿದ್ದಾರೆ. ದರ್ಶನ್, ವಿನಯ್, ದೀಪಕ್, ಪ್ರದೋಶ್, ನಾಗರಾಜ್ ಒಂದ್ಕಡೆ ಪಾರ್ಟಿ ಮಾಡಿದ್ದಾರೆ. ಅತ್ತ ಶವ ಬೀಸಾಡಿದ ನಂತರ ಕಾರ್ತಿಕ್, ಕೇಶವ್, ನಿಖಿಲ್ ಕೂಡ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ.