ತಿರುಪತಿಯಲ್ಲಿ ಭೀಕರ ರಸ್ತೆ ಅಪಘಾತ: ಬಸ್‌ಗೆ ಕಾರು ಡಿಕ್ಕಿಯಾಗಿ ದುರಂತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಿತ್ತೂರು ಜಿಲ್ಲೆಯ ತಿರುಪತಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.. ಈ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಿರುಪತಿ ಜಿಲ್ಲೆಯ ಎರ್ಪೇಡು ಮಂಡಲದ ಮೇರ್ಲಾಪಾಕ ಚೆರುವು ಎಂಬಲ್ಲಿ RTC ಬಸ್‌ಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಗು ಸೇರಿದಂತೆ ದಂಪತಿ ಸಾವನ್ನಪ್ಪಿದ್ದಾರೆ.

ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಿರುಪತಿಯ ರುಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ದಿಲ್ವಾಪಲ್ಲೆ ನಿವಾಸಿಗಳು ಎಂದು ಗುರುತಿಸಲಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಅಪಘಾತದ ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಅತಿವೇಗದಲ್ಲಿ ಚಲಾಯಿಸಿಕೊಂಡು ಬಂದಿದ್ದು, ನಿಯಂತ್ರಣಕ್ಕೆ ಬಾರದೆ ಬಸ್ ಗೆ ಡಿಕ್ಕಿ ಹೊಡೆದಿರುವುದೇ ಈ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!