ಕರ್ನಾಟಕ ದೇಗುಲಗಳಿಗೂ ತಟ್ಟಿದ ತಿರುಪತಿ ಲಡ್ಡು ಬಿಸಿ: ಪ್ರಸಾದಗಳ ಪರೀಕ್ಷೆಗೆ ಸರಕಾರ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿರುಪತಿಯ ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ವಿಚಾರ ಹೊರಬೀಳುತ್ತಿದ್ದಂತೆ ಇದರ ಬಿಸಿ ರಾಜ್ಯದ ಪ್ರಮುಖ ದೇವಾಲಯಗಳಿಗೆ ತಟ್ಟಿದೆ.

ಕರ್ನಾಟಕದ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ಭಕ್ತರಿಗೆ ನೀಡುವ ಪ್ರಸಾದವನ್ನು ಪರೀಕ್ಷೆಗೊಳಪಡಿಸಿಯೇ ಭಕ್ತರಿಗೆ ಹಂಚಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಕರ್ನಾಟಕದಲ್ಲಿ 34,000 ದತ್ತಿ ಇಲಾಖೆಯ ಸುಪರ್ದಿಯಲ್ಲಿರುವ ದೇವಾಲಯಗಳಿವೆ, ಅವುಗಳಲ್ಲಿ 205 ವರ್ಗ-ಎ ದೇವಾಲಯಗಳ ವಾರ್ಷಿಕ ಆದಾಯ 25 ಲಕ್ಷಕ್ಕೂ ಹೆಚ್ಚಾಗಿವೆ. 193 ವರ್ಗ-ಬಿ ದೇವಾಲಯಗಳ ವಾರ್ಷಿಕ ಆದಾಯ 5 ಲಕ್ಷದಿಂದ 25 ಲಕ್ಷ ರೂಪಾಯಿಗಳಾಗಿವೆ. ಉಳಿದವು 5 ಲಕ್ಷಕ್ಕಿಂತ ಕಡಿಮೆ ಆದಾಯವಿರುವ ವರ್ಗ-ಸಿ ದೇವಾಲಯಗಳಾಗಿ ವರ್ಗೀಕರಿಸಲ್ಪಟ್ಟಿವೆ. ಈ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದ ನಂತರ ಭಕ್ತರಿಗೆ ಪ್ರಸಾದವನ್ನು ನೀಡಲಾಗುತ್ತದೆ ಎಂದರು.

ಕರ್ನಾಟಕದ ದೇವಾಲಯಗಳಲ್ಲಿ ಅಂತಹ ಯಾವುದೇ ಘಟನೆಗಳು ಅಥವಾ ಕಲಬೆರಕೆಯಾಗಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಆದರೆ ಜನರಿಗೆ ಯಾವುದೇ ಅನುಮಾನ ಬೇಡ, ಆದ್ದರಿಂದ ನಾವು ಪರೀಕ್ಷೆಗೆ ಆದೇಶಿಸುತ್ತೇವೆ ಎಂದರು.

ಕರ್ನಾಟಕ ಹಾಲು ಮಹಾಮಂಡಳ (KMF) ಪೂರೈಸುವ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಮತ್ತು ಬೇರೆ ಯಾವುದೇ ಬ್ರಾಂಡ್ ನ ತುಪ್ಪ ಬಳಸದಂತೆ ರಾಜ್ಯ ದತ್ತಿ ಇಲಾಖೆಗೆ ಲಗತ್ತಿಸಲಾದ ಎಲ್ಲಾ ಪ್ರಮುಖ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಲಾಗುವುದು. ಕರ್ನಾಟಕವು ಹಲವು ವರ್ಷಗಳಿಂದ ತಿರುಪತಿಗೆ ಲಾಡು ತಯಾರಿಕೆಗೆ ನಂದಿನಿ ತುಪ್ಪವನ್ನು ಪೂರೈಸುತ್ತಿದೆ ಎಂದರು.

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರು ಕರ್ನಾಟಕದ ವಿವಿಧ ದೇವಾಲಯಗಳಲ್ಲಿ ನೀಡುವ ಪ್ರಸಾದವನ್ನು ಪರೀಕ್ಷಿಸಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!