ತಿರುಪತಿ ಲಡ್ಡು ವಿವಾದ: ತನಿಖೆಗೆ ಎಸ್‌ಐಟಿ ತಂಡ ರಚಿಸಿದ ಆಂಧ್ರ ಸರ್ಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ತಿರುಪತಿ ಲಡ್ಡು ತಯಾರಿಕೆಗೆ ಕಳಪೆ ಗುಣಮಟ್ಟದ ತುಪ್ಪ ಬಳಸಲಾಗಿದೆ. ಆ ತುಪ್ಪದಲ್ಲಿ ಪ್ರಾಣಿಯ ಕೊಬ್ಬು, ಮೀನಿನ ಎಣ್ಣೆ ಮತ್ತಿತರ ಎಣ್ಣೆಗಳ ಅಂಶ ಇದ್ದುದು ಲ್ಯಾಬ್ ವರದಿಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರ ಎಸ್​ಐಟಿ ರಚನೆ ಮಾಡಿದೆ.

ಸೆಪ್ಟೆಂಬರ್ 22ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತುಪ್ಪದಲ್ಲಿನ ಕಲಬೆರಕೆ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಎಸ್​ಐಟಿ ರಚನೆ ಮಾಡಲಾಗಿದೆ.

ಆಂಧ್ರ ಪ್ರದೇಶ ಸರ್ಕಾರ ಗುಂಟೂರು ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಸರ್ವಶ್ರೇಷ್ಠ ತ್ರಿಪಾಠಿ ಅವರನ್ನು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರನ್ನಾಗಿ ನೇಮಿಸಿದೆ. ವಿಶಾಖ ವ್ಯಾಪ್ತಿಯ ಡಿಐಜಿ ಗೋಪಿನಾಥ್, ಕಡಪ ಎಸ್ಪಿ ಹರ್ಷವರ್ಧನ್ ಅವರಲ್ಲದೆ, ಡಿಎಸ್‌ಪಿಗಳು ಮತ್ತು ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಇತರ ಸಿಬ್ಬಂದಿಯನ್ನು ಎಸ್‌ಐಟಿ ಒಳಗೊಂಡಿರುತ್ತದೆ.

ತಿರುಪತಿ ಪ್ರಸಾದವನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಹೊಂದಿರುವ ಕಲಬೆರಕೆ ತುಪ್ಪವನ್ನು ಖರೀದಿಸುವುದು ಮತ್ತು ಹಿಂದಿನ ಆಡಳಿತದಿಂದ ಅಧಿಕಾರದ ದುರುಪಯೋಗ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸಲಿದೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!