ತಿರುಪತಿ ಲಡ್ಡು‌ ವಿವಾದ: ಕೂಡಲಿ ಶ್ರೀ ಖಂಡನೆ, ನಾಳೆಯಿಂದ ಮೂರು ದಿನ ಉಪವಾಸ, ಮೌನವ್ರತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿರುಪತಿ ಲಡ್ಡು ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನಿನ ಅಂಶ ಬಳಕೆ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದು, ರಾಜಕೀಯ ನಾಯಕರು ಮಾತ್ರವಲ್ಲದೇ ವಿವಿಧ ಮಠಾಧೀಶರು ಕೂಡ ತ್ರೀವ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ತಿರುಪತಿಯ ಪ್ರಸಾದದ ವಿಷಯದಲ್ಲಿ ಸರ್ಕಾರಿ ವ್ಯವಸ್ಥೆಯು ಮಾಡಿದ ಅಪಚಾರವು ಜಘನ್ಯವಾಗಿದ್ದು, ಇದಕ್ಕೆ ಕಾರಣವಾಗಿರುವ ದೇವಸ್ಥಾನಗಳ ಮೇಲೆ ಇರುವ ಸರ್ಕಾರದ ಹಿಡಿತವನ್ನು ಹಿಂತೆಗೆದುಕೊಳ್ಳುವಂತೆ ಸಮಾಜವು ಒತ್ತಾಯಿಸಬೇಕು ಎಂದು ಕೂಡಲಿ ಶೃಂಗೇರಿ ಮಹಾ ಸಂಸ್ಥಾನದ 72ನೇ ಪೀಠಾಧಿಪತಿ ಶ್ರೀ ಅಭಿನವ ಶಂಕರಭಾರತೀ ಮಹಾಸ್ವಾಮಿಗಳು ಹೇಳಿದ್ದಾರೆ.

ಈ ಸಂದರ್ಭ ತಮ್ಮ ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಾರ್ವಜನಿಕರು ನಡೆದಿರುವ ಅಪಚಾರಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಾಗಿದೆ. ಈ ಪ್ರಾಯಶ್ಚಿತ್ತವನ್ನು ಎಲ್ಲರೂ ತಮ್ಮ ಮನೆಯಲ್ಲಿಯೇ ಸರಳವಾಗಿ ಮಾಡಿಕೊಳ್ಳಲು ತಿಳಿಸಿದ್ದಾರೆ.

ತಾವು ಕೂಡ ಶಾಸ್ತ್ರೀಯವಾದ ಪ್ರಾಯಶ್ಚಿತ್ತ ವಿಧಾನವನ್ನು ಅನುಸರಿಸುತ್ತಿದ್ದು, ಜೊತೆಗೆ ನಾಳೆಯಿಂದ ಮೂರು ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಮಾಡುತ್ತೇನೆ ಎಂದು ಹೇಳಿದ್ದಾರೆ.

ಹಿಂದು ಸಮಾಜವು ಸಾಮಾಜಿಕ ಜಾಗೃತಿಯ ಜೊತೆಗೆ ತಮ್ಮ ಆಧ್ಯಾತ್ಮಿಕ ಸಾಮರ್ಥ್ಯವನ್ನೂ ಹೆಚ್ಚಿಸಿಕೊಳ್ಳಲು ಇದೊಂದು ಮಾರ್ಗವಾಗಿದೆ. ಒಗ್ಗಟ್ಟಿನಲ್ಲಿ ಬಲವಿದೆ. ಆದರೆ ಆ ಬಲವು ಕೇವಲ ಸಾಮಾಜಿಕ ಹಾಗೂ ರಾಜಕೀಯ ಸಂಖ್ಯಾಬಲವು ಮಾತ್ರವಲ್ಲದೇ, ಆಧ್ಯಾತ್ಮಿಕ ತಳಹದಿಯ ಮೇಲೆ ನಿರ್ಮಾಣವಾದ ಬಲವಾಗಬೇಕು. ಆಗ ಮಾತ್ರವೇ ದುಷ್ಟಶಕ್ತಿಗಳ ದಮನವು ಸಾಧ್ಯ ಎಂಬುದು ಸ್ವಾಮಿಗಳು ಸಂದೇಶ ನೀಡಿದ್ದಾರೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!