ತಿರುಪತಿ ಲಡ್ಡು ವಿವಾದ: ದೇವರನ್ನು ರಾಜಕೀಯದಿಂದ ದೂರವಿಡಿ ಎಂದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ತಿರುಪತಿ ಲಡ್ಡು ಪ್ರಸಾದಲ್ಲಿ ಕಲಬೆರಕೆ ತುಪ್ಪ ಬಳಕೆಯಾಗಿದೆ ಎಂಬ ಆರೋಪದ ಹಿನ್ನಲೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ಆರಂಭಿಸಿದೆ.

ವಿಚಾರಣೆ ವೇಳೆ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಗಳು ರಾಜಕೀಯದಿಂದ ದೇವರನ್ನು ದೂರವಿಡಬೇಕು ಎಂದು ಒತ್ತಿ ಹೇಳಿದೆ.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು ಆಂಧ್ರಪ್ರದೇಶ ಸರ್ಕಾರ ಮತ್ತು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದ್ದು, ಈ ವಿಷಯದ ಬಗ್ಗೆ ಈಗಾಗಲೇ ತನಿಖೆಗೆ ಆದೇಶಿಸಿರುವಾಗ ಸಾರ್ವಜನಿಕ ಹೇಳಿಕೆ ನೀಡುವುದು ಏಕೆ? ಪತ್ರಿಕಾಗೋಷ್ಠಿ ನಡೆಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದೆ.

ನೀವು ಎಸ್‍ಐಟಿ ತನಿಖೆಗೆ ಆದೇಶಿಸಿದ್ದೀರಿ. ತನಿಖೆಯ ವರದಿ ಬರುವ ಮುನ್ನ, ಪತ್ರಿಕಾಗೋಷ್ಠಿ ನಡೆಸುವ ಅವಶ್ಯಕತೆ ಏನು? ನೀವು ಯಾವಾಗಲೂ ಅಂತಹದ್ದಕ್ಕಾಗಿ ಕಾಣಿಸಿಕೊಳ್ಳುತ್ತಿದ್ದೀರಿ ಎಂದು ನ್ಯಾಯಾಲಯ ಆಂಧ್ರ ಪ್ರದೇಶ ಸರ್ಕಾರದ ಪರ ವಕೀಲ ರೋಹಟಗಿಯವರಿಗೆ ಪ್ರಶ್ನಿಸಿತು.

ಲಡ್ಡು ತಯಾರಿಕೆಯಲ್ಲಿ ಕಲುಷಿತ ತುಪ್ಪವನ್ನು ಬಳಸಲಾಗಿದೆ ಎಂಬುದಕ್ಕೆ ಸಾಕ್ಷಿ ಏನು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಈ ಕುರಿತು ತಿರುಪತಿ ದೇವಸ್ಥಾನದ ಪರ ವಾದ ಮಂಡಿಸಿದ ವಕೀಲ ಸಿದ್ಧಾರ್ಥ್ ಲೂತ್ರಾ, `ನಾವು ತನಿಖೆ ನಡೆಸುತ್ತಿದ್ದೇವೆ’ ಎಂದು ಪೀಠಕ್ಕೆ ತಿಳಿಸಿದರು. ಈ ವೇಳೆ ನೀವು `ಮಾಧ್ಯಮದ ಮುಂದೆ ಹೋಗುವ ಅಗತ್ಯವೇನಿತ್ತು?’ ನೀವು ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕು ಎಂದು ಕೋರ್ಟ್ ಎಚ್ಚರಿಕೆ ನೀಡಿತು.

ತುಪ್ಪದಲ್ಲಿ ಕಲಬೆರಕೆ ನಡೆದಿದೆ ಎನ್ನುವುದಕ್ಕೆ ಇಲ್ಲಿಯವರೆಗೆ ಯಾವುದೇ ಅಧಿಕೃತ ಸಾಕ್ಷಿ ಇಲ್ಲದೇ ಇರುವಾಗ ಸುದ್ದಿಗೋಷ್ಠಿ ನಡೆಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿತು. ತುಪ್ಪದಲ್ಲಿ ಕಲಬೆರಕೆ ಆಗಿದೆಯೇ ಎಂದು `ನೀವು ಎರಡನೇ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕು ಎಂದು ವಿವೇಕವಿಲ್ಲವೇ? ಎಂದು ಸರ್ಕಾರಕ್ಕೆ ನ್ಯಾಯಮೂರ್ತಿ ವಿಶ್ವನಾಥನ್ ಅವರು ಪ್ರಶ್ನಿಸಿದರು.

ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ರಾಜ್ಯಸಭಾ ಸಂಸದ ಮತ್ತು ಟಿಟಿಡಿ ಮಾಜಿ ಅಧ್ಯಕ್ಷ ವೈವಿ ಸುಬ್ಬಾ ರೆಡ್ಡಿ ಸಲ್ಲಿಸಿದ್ದ ಮೂರು ಅರ್ಜಿಗಳು ಮತ್ತು ಇತಿಹಾಸಕಾರ ವಿಕ್ರಮ್ ಸಂಪತ್ ಮತ್ತು ಆಧ್ಯಾತ್ಮಿಕ ಪ್ರವಚನಕಾರ ದುಷ್ಯಂತ್ ಶ್ರೀಧರ್ ಅವರು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!