ತಿರುಪತಿ ಕಾಲ್ತುಳಿತ ದುರಂತ: ನ್ಯಾಯಾಂಗ ತನಿಖೆಗೆ ಸಿಎಂ ನಾಯ್ಡು ಆದೇಶ, ಇಬ್ಬರು ಅಧಿಕಾರಿಗಳ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿರುಪತಿ ದೇವಸ್ಥಾನದಲ್ಲಿ ಉಂಟಾದ ಕಾಲ್ತುಳಿತಕ್ಕೆ ಆರು ಮಂದಿ ಬಲಿಯಾಗಿದ್ದು, ಈ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ತಿರುಪತಿಯ ಮೇಲ್ವಿಚಾರಣಾ ವ್ಯವಸ್ಥೆಯಲ್ಲಿ ಕೆಲವು ಲೋಪದೋಷಗಳನ್ನು ನಾನು ನೋಡಿದ್ದೇನೆ ಎಂದು ಸಿಎಂ ನಾಯ್ಡು ಕಾಲ್ತುಳಿತದ ಸ್ಥಳಕ್ಕೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿಯಾದ ನಂತರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸುಗಮ ಕಾರ್ಯಾಚರಣೆ ನಡೆಸಲು ವಿಫಲರಾದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ತಿರುಪತಿ ಎಸ್ಪಿ, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಜಂಟಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಇನ್ನೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ ಎಂದು ಅವರು ಹೇಳಿದರು.

ಘಟನೆಯಿಂದ ತನಗೆ ನೋವಾಗಿದೆ ಎಂದು ಹೇಳಿದ ಆಂಧ್ರ ಸಿಎಂ, ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಿಸಿದರು.

33 ಮಂದಿ ಗಾಯಗೊಂಡಿದ್ದಾರೆ. ಅವರಿಗೆ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು ಎಂದು ಅವರು ಹೇಳಿದರು.

ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಂ ಟಿಕೆಟ್ ಗಾಗಿ ನೂರಾರು ಜನರು ಮುಗಿಬಿದ್ದಿದ್ದರಿಂದ ಕಾಲ್ತುಳಿತದಲ್ಲಿ ಆರು ಭಕ್ತರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!