Wednesday, July 6, 2022

Latest Posts

ಬಂಗಾಳ ಉಪಚುನಾವಣೆಗೆ ಟಿಎಂಸಿಯಿಂದ ಅಭ್ಯರ್ಥಿಗಳನ್ನು ಘೋಷಿಸಿದ ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಶ್ಚಿಮ ಬಂಗಾಳ ಲೋಕಸಭಾ ಉಪಚುನಾವಣೆಗೆ ಟಿಎಂಸಿ ಅಭ್ಯರ್ಥಿಗಳನ್ನು ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಾಮನಿರ್ದೇಶನ ಮಾಡಿದ್ದಾರೆ.

ಅಸನ್ಸೂಲ್‌ ಲೋಕಸಭಾ ಕ್ಷೇತ್ರಕ್ಕೆ ಶತ್ರುಘ್ನ ಸಿನ್ಹಾ ಮತ್ತು ಬ್ಯಾಲಿಗುಂಗೆ ವಿಧಾನಸಭಾ ಉಪಚುನಾವಣೆಗೆ ಬಾಬುಲ್‌ ಸುಪಿಯೋ ಅವರನ್ನು ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಟ್ವಿಟರ್‌ ನಲ್ಲಿ ಘೋಷಣೆ ಮಾಡಿದ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಮಾಜಿ ಕೇಂದ್ರ ಸಚಿವ ಮತ್ತು ಖ್ಯಾತ ನಟ ಶತ್ರುಘ್ನ ಸಿನ್ಹಾ ಅವರು ಅಸನ್ಸೋಲ್ ಲೋಕಸಭಾ ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಎಂದು ಘೋಷಿಸಲು ಸಂತೋಷವಾಗಿದೆ. ಮಾಜಿ ಕೇಂದ್ರ ಸಚಿವ ಮತ್ತು ಹೆಸರಾಂತ ಗಾಯಕ ಬಾಬುಲ್ ಸುಪ್ರಿಯೋ ಅವರು ಬ್ಯಾಲಿಗುಂಗೆಯಿಂದ ವಿಧಾನಸಭಾ ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯಾಗುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss