May 22, 2026
Friday, May 22, 2026
spot_img

ಟಿಎಂಸಿ ಸರಕಾರದಿಂದ ರಾಷ್ಟ್ರಪತಿಗಳಿಗೆ ಅವಮಾನ: ಮಮತಾ ಬ್ಯಾನರ್ಜಿ ವಿರುದ್ಧ ಪ್ರಧಾನಿ ಮೋದಿ ಆಕ್ರೋಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಬಂಗಾಳ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ರಾಷ್ಟ್ರಪತಿಗಳು ಸಿಲಿಗುರಿಗೆ ಆಗಮಿಸಿದಾಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಥವಾ ಅವರ ಸಂಪುಟದ ಯಾವುದೇ ಸಚಿವರು ಅವರನ್ನು ಸ್ವಾಗತಿಸಲು ಬರಲಿಲ್ಲ. ಇದು ಗಂಭೀರ ಶಿಷ್ಟಾಚಾರದ ಲೋಪ ಎಂದು ರಾಷ್ಟ್ರಪತಿಗಳು ಹೇಳಿದರು.

ಈ ಘಟನೆ ಕುರಿತು ಪ್ರಧಾನಿ ಮೋದಿ ಅವರು ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ (ಟ್ವಿಟರ್) ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ, ‘ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರವು ಎಲ್ಲಾ ಮಿತಿಗಳನ್ನು ಮೀರಿದೆ. ಆದಿವಾಸಿ ಸಮುದಾಯದಿಂದ ಬಂದಿರುವ ರಾಷ್ಟ್ರಪತಿಗಳಿಗೆ ಮಾಡಿರುವ ಈ ಅವಮಾನವು ಪ್ರತಿಯೊಬ್ಬ ಭಾರತೀಯನಿಗೂ ನೋವು ತಂದಿದೆ’ ಎಂದು ಕಿಡಿಕಾರಿದ್ದಾರೆ.

ಘಟನೆಯನ್ನು ನಾಚಿಕೆಗೇಡಿನ ಕೃತ್ಯ ಎಂದು ಕರೆದ ಮೋದಿ, ಬುಡಕಟ್ಟು ಸಂಸ್ಕೃತಿಯನ್ನು ಪಶ್ಚಿಮ ಬಂಗಾಳ ಸರ್ಕಾರವು ಅತ್ಯಂತ ನಿರ್ಲಕ್ಷ್ಯದಿಂದ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !