2024ರ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಸ್ವತಂತ್ರ ಸ್ಪರ್ಧೆ: ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2024ರ ಲೋಕಸಭಾ ಚುನಾವಣೆಯಲ್ಲಿ ಸಮಾನ ಮನಸ್ಕ ಜಾತ್ಯತೀತ ಶಕ್ತಿಗಳನ್ನು ಒಗ್ಗೂಡಿಸಲು ಒಂದೆಡೆ ಕಾಂಗ್ರೆಸ್ ಪ್ರಯತ್ನಗಳು ನಡೆಸುತ್ತಿದ್ದರೆ, ಇತ್ತ

ಬಿಜೆಪಿ ಹಾಗೂ ಕಾಂಗ್ರೆಸ್ ಹೊರತಾದ ತೃತೀಯ ರಂಗ ರಚನೆಗೆ ಕೆಲವು ಪ್ರಾದೇಶಿಕ ಪಕ್ಷಗಳು ಪ್ರಯತ್ನ ಪಡುತ್ತಿವೆ. ಈ ನಡುವೆ 2024ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದೆ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅಲ್ಪಸಂಖ್ಯಾತರಾಗಲಿ ಅಥವಾ ಬಹುಸಂಖ್ಯಾತರಾಗಲಿ ಎಲ್ಲರೂ ನಮ್ಮೊಂದಿಗೆ ಇದ್ದಾರೆ. ಎಲ್ಲರೂ ನಮಗೆ ಸಮಾನರು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!