ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣಮೂಲ ಸಂಸದ ಡೆರೆಕ್ ಒ’ಬ್ರಿಯಾನ್ ಹಕ್ಕುಚ್ಯುತಿ ನೊಟೀಸ್ ಮಂಡಿಸಿದ್ದಾರೆ.
ರಾಜ್ಯಗಳ ಪರಿಷತ್ತಿನ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ನಿಯಮ 187ರ ಅಡಿಯಲ್ಲಿ ಹಕ್ಕುಚ್ಯುತಿ ನೊಟೀಸ್ ಸಲ್ಲಿಸಿದ್ದಾರೆ.
ಡಿಸೆಂಬರ್ 17 ರಂದು ಸಂಸತ್ತಿನ ಅಧಿವೇಶನದಲ್ಲಿ ಅಮಿತ್ ಶಾ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ನೊಟೀಸ್ ನೀಡಲಾಗಿದೆ, ಇದು ಡಾ.ಬಿ.ಆರ್ ಅಂಬೇಡ್ಕರ್ ಅವರ ಪರಂಪರೆ ಮತ್ತು ಸಂಸತ್ತಿನ ಘನತೆಯನ್ನು ದುರ್ಬಲಗೊಳಿಸುತ್ತದೆ ಎಂದು ಒ’ಬ್ರೇನ್ ಹೇಳಿದ್ದಾರೆ.
ಮಂಗಳವಾರ ರಾಜ್ಯಸಭೆಯಲ್ಲಿ ಸಂವಿಧಾನದ ಚರ್ಚೆಯ ವೇಳೆ ಮಾತನಾಡಿದ ಶಾ ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ‘ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಎಂದು ಹೇಳುವುದು ಫ್ಯಾಷನ್ ಆಗಿಬಿಟ್ಟಿದೆ. ಅವರು ಇಷ್ಟು ಬಾರಿ ದೇವರ ಹೆಸರನ್ನು ತೆಗೆದುಕೊಂಡಿದ್ದರೆ, ಅವರಿಗೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು’ ಎಂದು ಅಮಿತ್ ಶಾ ಹೇಳಿದ್ದರು.