ಸಿಬಿಐ ವಿರುದ್ಧ ಆಯೋಗಕ್ಕೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಸಿಬಿಐ ವಿರುದ್ಧ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಕಾನೂನುಬಾಹಿರ ಮತ್ತು ಅಸಮಂಜಸ ನಡೆಗಳ ಮೂಲಕ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸಲು ಸಿಬಿಐ ಪ್ರಯತ್ನಿಸುತ್ತಿದೆ.ನೀತಿ ಸಂಹಿತೆಯ ಅವಧಿಯಲ್ಲಿ ಕೇಂದ್ರ ತನಿಖಾ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಬೇಕು’ ಎಂದೂ ಮಹುವಾ ಆಗ್ರಹಿಸಿದ್ದಾರೆ.

ಕಾಸಿಗಾಗಿ ಪ್ರಶ್ನೆ ಪ್ರಕರಣ ಸಂಬಂಧ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಕಚೇರಿ ಮತ್ತು ನಿವಾಸಗಳ ಮೇಲೆ ಸಿಬಿಐ ಅಧಿಕಾರಿಗಳು ಶನಿವಾರ (ಮಾರ್ಚ್‌ 23) ದಾಳಿ ಮಾಡಿದ್ದರು. ಈ ಪ್ರಕರಣ ಸಂಬಂಧ ಲೋಕಪಾಲ್‌ ನಿರ್ದೇಶನದ ಮೇಲೆ ಸಿಬಿಐ, ಮಹುವಾ ಮೊಯಿತ್ರಾ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಿತ್ತು.

ಶನಿವಾರ ಬೆಳಗ್ಗೆ ಮಹುವಾ ಮೊಯಿತ್ರಾ ಅವರ ಕೋಲ್ಕತ್ತ ನಿವಾಸ, ಕಚೇರಿ ಸೇರಿದಂತೆ ದೆಹಲಿ ಕಚೇರಿಗಳ ಮೇಲೆಯೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು.

ಇತ್ತ ಮಹುವಾ ಅವರು ಬಂಗಾಳದ ಕೃಷ್ಣನಗರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!