ಹೊಸದಿಗಂತ ಡಿಜಿಟಲ್ ಡೆಸ್ಕ್ :
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಿರಿಯ ಮುಖಂಡ ಮುಕುಲ್ ರಾಯ್ ಮತ್ತೆ ಬಿಜೆಪಿ ಪಕ್ಷಕ್ಕೆ ಮರಳಲು ಇಚ್ಚಿಸಿದ್ದು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲು ಬಯಸಿರುವುದಾಗಿ ಹೇಳಿದ್ದಾರೆ.
ದೆಹಲಿಯಲ್ಲಿ ಈ ವಿಷಯ ಕುರಿತು ಅವರು ಮಾತನಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ನಮ್ಮ ತಂದೆ ಸೋಮವಾರದಿಂದ ಕಾಣೆಯಾಗಿದ್ದಾರೆ ಎಂದು ಮುಕುಲ್ ರಾಯ್ ಪುತ್ರ ಕೋಲ್ಕತ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ಮಾನಸಿಕ ಆರೋಗ್ಯ ಸರಿ ಇಲ್ಲ, ಅವರನ್ನು ಪತ್ತೆ ಮಾಡಿಕೊಡಿ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ಕಾಣಿಸಿಕೊಂಡ ಮುಕುಲ್ ರಾಯ್ ‘ನಾನು ಮಾನಸಿಕವಾಗಿ ಬಿಜೆಪಿಯಲ್ಲಿರುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿರುವೆ‘ ಎಂದು ಹೇಳಿದ್ದಾರೆ.
ಟಿಎಂಸಿಯ ಸ್ಥಾಪಕ ಸದಸ್ಯರಾಗಿರುವ ಮುಕುಲ್ ರಾಯ್ 2017ರಲ್ಲಿ ಬಿಜೆಪಿ ಸೇರಿದ್ದರು. ನಂತರ ಬಿಜೆಪಿ ತ್ಯಜಿಸಿ 2021ರಲ್ಲಿ ಟಿಎಂಸಿ ಸೇರಿದರು. ಇದೀಗ ಮತ್ತೆ ಬಿಜೆಪಿ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.