SHOCKING | ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ನಾಯಕನಿಗೆ ಗುಂಡಿಕ್ಕಿ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಜಗತ್‌ದಲ್ ಪ್ರದೇಶದ ತೃಣಮೂಲ ಕಾಂಗ್ರೆಸ್ ನಾಯಕನನ್ನು ಬುಧವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ವ್ಯಕ್ತಿಯನ್ನು ಜಗತ್‌ದಲ್ ವಾರ್ಡ್ ನಂ 12 ರ ಟಿಎಂಸಿ ಮಾಜಿ ಅಧ್ಯಕ್ಷ ಅಶೋಕ್ ಶಾ ಎಂದು ಗುರುತಿಸಲಾಗಿದೆ.

ಜಗತ್‌ದಲ್ ಪೊಲೀಸ್ ಠಾಣೆಯಿಂದ ಕೇವಲ ನೂರು ಮೀಟರ್ ದೂರದಲ್ಲಿರುವ ಟೀ ಸ್ಟಾಲ್‌ ಮುಂದೆ ನಿಂತಿದ್ದ ಟಿಎಂಸಿ ಮುಖಂಡ ಶಾ ಮೇಲೆ ಬಾಂಬ್‌ ಎಸೆದ ದುಷ್ಕರ್ಮಿಗಳು, ಅವರ ಮೇಲೆ ಹಲವು ಬಾರಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!