ಬಂಗಾಳದಲ್ಲಿ ಮತದಾನದ ವೇಳೆ ಬಿಜೆಪಿ ಅಭ್ಯರ್ಥಿಯೊಂದಿಗೆ ಟಿಎಂಸಿ ನಾಯಕರ ಗಲಾಟೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೂರನೇ ಹಂತದ ಲೋಕಸಭಾ ಚುನಾವಣೆಯ ವೇಳೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಜಂಗಿಪುರದ ಮತಗಟ್ಟೆಯಲ್ಲಿ ಟಿಎಂಸಿ ಹಾಗೂ ಬಿಜೆಪಿ ನಾಯಕರ ನಡುವೆ ಗಲಾಟೆಯಾಗಿದೆ.

 ಟಿಎಂಸಿ ಬೂತ್ ಅಧ್ಯಕ್ಷ ಗೌತಮ್ ಘೋಷ್ ಮತ್ತು ಬಿಜೆಪಿ ಅಭ್ಯರ್ಥಿ ಧನಂಜಯ್ ಘೋಷ್ ನಡುವೆ ಘರ್ಷಣ ನಡೆದಿದೆ. ಘೋಷ್ ಜಂಗಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಜಂಗೀಪುರ ಲೋಕಸಭಾ ಕ್ಷೇತ್ರದಲ್ಲಿ ತೃಣಮೂಲ ಕಾಂಗ್ರೆಸ್ ವಿರುದ್ಧ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪಗಳು ಕೇಳಿಬಂದಿದ್ದವು.

ಗೌತಮ್ ಘೋಷ್ ಬಿಜೆಪಿ ಅಭ್ಯರ್ಥಿಯೊಂದಿಗೆ ತೀವ್ರ ಮಾತಿನ ಚಕಮಕಿ ನಡೆಸಿದರು. ಮಿರ್ಗ್ರಾಮ್ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 44 ರಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಬ್ಲಾಕ್ ತೃಣಮೂಲ ಅಧ್ಯಕ್ಷ ಗೌತಮ್ ಘೋಷ್ ಇಬ್ಬರೂ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!