ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ನಗದು ಪಡೆದ ಆರೋಪದಲ್ಲಿ ಸಿಲುಕಿಕೊಂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ ಎದುರಾಗಿದ್ದು, ಸಂಸತ್ತಿನಿಂದ ಉಚ್ಚಾಟಿಸುವ ಶಿಫಾರಸಿಗೆ ಸಂಸದೀಯ ನೈತಿಕ ಸಮಿತಿ ಅನುಮೋದನೆ ನೀಡಿದೆ ಎಂದು ಹೇಳಲಾಗುತ್ತಿದೆ.
ಆರು ಸದಸ್ಯರು ಶಿಫಾರಸಿನ ಪರವಾಗಿ ಮತ ಚಲಾಯಿಸಿದ್ದರೆ, ನಾಲ್ವರು ವಿರುದ್ಧವಾಗಿ ಮತ ಚಲಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮಕ್ಕಾಗಿ ವರದಿಯನ್ನು ಈಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ಸಂಸದ ವಿನೋದ್ ಕುಮಾರ್ ಸೋಂಕರ್ ನೇತೃತ್ವದ ಲೋಕಸಭೆ ನೈತಿಕ ಸಮಿತಿಯು ಮಹುವಾ ಅವರನ್ನು ಉಚ್ಚಾಟಿಸಲು ಶಿಫಾರಸು ಮಾಡುವ ವರದಿಯನ್ನು ಅಂಗೀಕರಿಸಿದೆ.ಸಮಿತಿಯ ಆರು ಸದಸ್ಯರು ವರದಿ ಅಂಗೀಕರಿಸುವುದನ್ನು ಬೆಂಬಲಿಸಿದ್ದು, ನಾಲ್ವರು ವಿರೋಧ ವ್ಯಕ್ತಪಡಿಸಿದ್ದರು ಎಂದು ಇಂದು ನಡೆದ ಸಭೆ ಬಳಿಕ ಸೋಂಕರ್ ಸುದ್ದಿಗಾರರಿಗೆ ತಿಳಿಸಿದರು.