8 ತಿಂಗಳ ಗರ್ಭಿಣಿಯ ಹೊಟ್ಟೆಗೆ ಒದ್ದ TMC ಕಾರ್ಯಕರ್ತರು: 7 ಮಂದಿಯ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಂಟು ತಿಂಗಳ ಗರ್ಭಿಣಿಯ ಮೇಲೆ ಹಲ್ಲೆ ನಡೆಸಿದ ಘಟನೆ ಭಾನುವಾರ ತಡರಾತ್ರಿ ನರ್ಕೆಲ್‌ದಂಗ ​​ಪ್ರದೇಶದಲ್ಲಿ ನಡೆದಿದೆ.
ಕಟ್ಟಡ ನಿರ್ಮಾಣ ವಿಚಾರದಲ್ಲಿ ಜಗಳ ನಡೆದಿದ್ದು, ಮಹಿಳೆಯನ್ನು ಕೋಲ್ಕತ್ತಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ಮಾಹಿತಿ ಪ್ರಕಾರ ಹೊಟ್ಟೆಯಲ್ಲಿರುವ ಮಗುವಿನ ಆರೋಗ್ಯ ಸ್ಥಿತಿ ಚೆನ್ನಾಗಿದೆ ಎಂದು ತಿಳಿದುಬಂದಿದೆ.
ಇನ್ನು ಘಟನೆಯಲ್ಲಿ ತೃಣಮೂಲ ಶಾಸಕ ಪರೇಶ್ ಪಾಲ್ ಮತ್ತು ಕೌನ್ಸಿಲರ್ ಸ್ವಪನ್ ಸಮದ್ದಾರ್ ಅವರ ಅನುಯಾಯಿಗಳು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ನರ್ಕೆಲದಂಗ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಾಗಿದೆ.
ಈ ಘಟನೆಯಲ್ಲಿ ದೂರುದಾರರಾಗಿದ್ದ ತಂದೆ ಮತ್ತು ಮಗನನ್ನು ಈ ಹಿಂದೆ ಬೇರೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ನರ್ಕೆಲದಂಗ ನಿವಾಸಿ ಶಿಬ್ ಶಂಕರ್ ದಾಸ್ ಮತ್ತು ಅವರ ಪುತ್ರ ದೀಪಕ್ ದಾಸ್ ಮಾತನಾಡಿ, ಈ ಪ್ರದೇಶದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ದಂಧೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದೇವೆ. ಇದರಿಂದ ಸ್ಥಳೀಯರು ಭಾನುವಾರ ಪುರಸಭಾ ಸದಸ್ಯರನ್ನು ಭೇಟಿ ಮಾಡುತ್ತೇವೆ ಎಂದು ಅವರ ಅನುಯಾಯಿಗಳನ್ನು ಕೇಳಿಕೊಂಡರೂ ಪುರಸಭಾ ಸದಸ್ಯರ ಅನುಯಾಯಿಗಳು ಅದನ್ನು ನಿರಾಕರಿಸಿದರು. ನಂತರ ಸಂಜೆಯ ವೇಳೆಗೆ ಕೌನ್ಸಿಲರ್ ಮತ್ತು ಶಾಸಕರ ಅನುಯಾಯಿಗಳು ಮನೆಗೆ ನುಗ್ಗಿ ಥಳಿಸಿದ್ದಾರೆ ಎಂದು ದೂರಿದ್ದಾರೆ.
ಇನ್ನು ಘಟನೆಯಲ್ಲಿ ಮನೆಯ ಮಹಿಳೆಯರ ಮೇಲೂ ಹಲ್ಲೆ ಮಾಡಲಾಗಿದೆ. ಆ ವೇಳೆ ದೀಪಕ್ ಅವರ ಎಂಟು ತಿಂಗಳ ಗರ್ಭಿಣಿ ಪತ್ನಿಯ ಹೊಟ್ಟೆಗೆ ಒದೆಯಲಾಗಿದೆ. ಆಕೆ ಇನ್ನೂ ಚಿಂತಾಜನಕ ಸ್ಥಿತಿಯಲ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂತ್ರಸ್ತ ಕುಟುಂಬದ ಪ್ರಕಾರ, ಮನೆಯಲ್ಲಿ ಹಿಂಸಾಚಾರ ನಡೆಯುತ್ತಿರುವಾಗ ಅವರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದರಂತೆ. ಆದರೆ, ನರ್ಕೆಲ್ದಂಗ ಪೊಲೀಸ್ ಠಾಣೆ ಪೊಲೀಸರು ಕ್ರಮ ಕೈಗೊಳ್ಳುವುದು ಇರಲಿ ಇವರನ್ನೇ ಬಂಧಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರಂತೆ.
ಘಟನೆ ನಂತರ ಕೋಲ್ಕತ್ತಾ ಪೊಲೀಸ್ ಅಧಿಕಾರಿಗಳು ರಾತ್ರಿಯೇ ಆ ಪ್ರದೇಶಕ್ಕೆ ಬಂದು ತನಿಖೆ ಆರಂಭಿಸಿದ್ದಾರೆ. ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಈವರೆಗೆ 7 ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!